ಭಾನುವಾರ, ಸೆಪ್ಟೆಂಬರ್ 20, 2020
21 °C

ಗುರುಪೂರ್ಣಿಮೆಯಂದು ಮಾತೆ ಮಾಣಿಕೇಶ್ವರಿ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಆಷಾಢಮಾಸದ ಗುರುಪೂರ್ಣಿಮೆ ದಿನವಾದ ಜುಲೈ 16ರಂದು ಸೇಡಂ ತಾಲ್ಲೂಕಿನ ಯಾನಾಗುಂದಿಯಲ್ಲಿ ಮಾತೆ ಮಾಣಿಕೇಶ್ವರಿ ಅವರ 76ನೇ ಜನ್ಮದಿನೋತ್ಸವ ನಡೆಯಲಿದ್ದು, ಅಂದು ಭಕ್ತರಿಗೆ ದರ್ಶನ ನೀಡಲಿದ್ದಾರೆ.

ಅಂದು ಬೆಳಿಗ್ಗೆಯಿಂದಲೇ ಮಾತಾಜಿ ಅವರ ಪಾದಪೂಜೆ, ನಾಮ ಸ್ಮರಣೆ, ಭಜನೆ, ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಯಾನಾಗುಂದಿಯ ಸೂರ್ಯನಂದಿ ಕ್ಷೇತ್ರದ ಮಾತಾಜಿ ಟ್ರಸ್ಟ್‌ ಕಾರ್ಯದರ್ಶಿ ಶಿವಯ್ಯಾ ಸ್ವಾಮಿ ತಿಳಿಸಿದ್ದಾರೆ. 

ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಸಾರಿಗೆ ವ್ಯವಸ್ಥೆ, ನೀರು, ವಸತಿ ಹಾಗೂ ಮಹಾಪ್ರಸಾದ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು