ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೆ ಮಾಣಿಕೇಶ್ವರಿ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು

Last Updated 8 ಮಾರ್ಚ್ 2020, 9:24 IST
ಅಕ್ಷರ ಗಾತ್ರ
ADVERTISEMENT
""
""
""

ಸೇಡಂ (ಕಲಬುರ್ಗಿ): ಮಾತೆ ಮಾಣಿಕೇಶ್ವರಿ ಅಮ್ಮನವರ ಅಂತಿಮ ದರ್ಶನಕ್ಕೆಂದು ಯಾನಾಗುಂದಿ ಮಾಣಿಕ್ಯಗಿರಿಗೆ ಭಾನುವಾರ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

ಮಾಣಿಕ್ಯಗಿರಿಯ ಮೇಲ್ಭಾಗದ ಮುಖ್ಯದ್ವಾರ ಬಳಿ ಮಾತೆ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರ ಇರಿಸಲಾಗಿದೆ.ಬಾಬುರಾವ ಚಿಂಚನಸೂರ, ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಹಲವು ಗಣ್ಯರು ಗಿರಿಗೆ ಭೇಟಿ ನೀಡಿ ಮಾತೆಗೆ ಆಂತಿಮ ನಮನ ಸಲ್ಲಿಸಿದರು. ಸರತಿ ಸಾಲಿನಲ್ಲಿ ಭಕ್ತರು ಅಂತಿಮದರ್ಶನ ಪಡೆಯಲು ಪೊಲೀಸರು ವ್ಯವಸ್ಥೆ ಮಾಡಿದ್ದಾರೆ.

ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ (87) ಶನಿವಾರ ರಾತ್ರಿ ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಯಾನಾಗುಂದಿ ಆಶ್ರಮದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.

ಆಶ್ರಮದಲ್ಲಿ ಆಖಂಡ ಭಜನೆ ನಡೆಯುತ್ತಿದೆ.ಮಾತೆಯವರ ನಿಧನ ಸುದ್ದಿ ತಿಳಿದಗ್ರಾಮೀಣ ಭಾಗದ ಭಕ್ತರು ಬೆಟ್ಟದತ್ತ ಧಾವಿಸುತ್ತಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT