ಗುರುವಾರ , ಏಪ್ರಿಲ್ 9, 2020
19 °C

ಮಾತೆ ಮಾಣಿಕೇಶ್ವರಿ ಅಮ್ಮನವರ ದರ್ಶನಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಕಲಬುರ್ಗಿ: ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿಕೇಶ್ವರಿ(87) ಶನಿವಾರ ರಾತ್ರಿ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ದಂಡೇ ಹರಿದು ಬರುತ್ತಿದೆ. 

ಮಾಣಿಕ್ಯಗಿರಿಯ ಮೇಲ್ಭಾಗದ  ಮುಖ್ಯದ್ವಾರದ ಬಳಿ ಮಾತೆ ಮಾಣಿಕೇಶ್ವರಿ ಅಮ್ಮನವರ ಪಾರ್ಥಿವ ಶರೀರವನ್ನು ಇಡಲಾಗಿದೆ.  ಬಾಬುರಾವ ಚಿಂಚನಸೂರ, ಮಾಲೀಕಯ್ಯ ಗುತ್ತೇದಾರ ಸೇರಿದಂತೆ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. 

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ, ಯಾನಾಗುಂದಿ ಆಶ್ರಮದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು.

ಸರತಿ ಸಾಲಿನಲ್ಲಿ ಭಕ್ತರು ದರ್ಶನ ಪಡೆಯಲು ಸಕಲ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖಾ ಅಧಿಕಾರಿಗಳಾದ ಎಸ್‌ಪಿ ದೇಸಾಯಿ. ಡಿವೈಎಸ್‌ಪಿ ಈ. ಎಸ್. ವೀರಭದ್ರಯ್ಯ, ಸಿಪಿಐ ರಾಜಶೇಖರ ಹಳಗೋದಿ, ಆನಂದರಾವ, ಪಿಎಸ್ಐ ಸುಶೀಲ್ ಕುಮಾರ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು