ಸೋಮವಾರ, ಮೇ 23, 2022
24 °C

20ರಂದು ಮೇಯರ್‌, ಉಪಮೇಯರ್‌ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಹಾಗೂ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆಗೆ ನವೆಂಬರ್‌ 20ರಂದು ಮಧ್ಯಾಹ್ನ 12.30ಕ್ಕೆ ಟೌನ್‌ಹಾಲ್‌ನಲ್ಲಿ ನಡೆಸಲು ಮಹೂರ್ತ ನಿಗದಿಯಾಗಿದೆ.

ಚುನಾವಣೆ ಅಧಿಸೂಚನೆ ಹೊರಡಿಸಿರುವ ಪ್ರಾದೇಶಿಕ ಆಯುಕ್ತ ಡಾ.ಎನ್‌.ವಿ. ಪ‍್ರಸಾದ್‌, ಮೇಯರ್‌ ಸ್ಥಾನವು ‘ಸಾಮಾನ್ಯ ಮಹಿಳೆ’ ಹಾಗೂ ಉಪಮೇಯರ್‌ ಸ್ಥಾನವು ‘ಹಿಂದುಳಿದ ವರ್ಗ–ಬ’ಗೆ ಮೀಸಲಾಗಿದೆ. ಚುನಾವಣೆ ನಡೆಯುವ ನ. 20ರಂದು ಬೆಳಿಗ್ಗೆ 9ರಿಂದಲೇ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ 12.30ರ ವೇಳೆಗೆ ಮತದಾನ ಪ್ರಕ್ರಿಯೆ ಆರಂಭವಾಗುವುದು ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್‌ 6ರಂದು ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್‌ 27, ಬಿಜೆಪಿ 24 ಹಾಗೂ ಜೆಡಿಎಸ್‌ ನಾಲ್ಕು ಸ್ಥಾನಗಳನ್ನು ಗೆದ್ದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.