ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಶಿಥಲೀಕರಣ ಘಟಕದಲ್ಲಿ ದನದ ಮಾಂಸ ಪತ್ತೆ

Last Updated 21 ಫೆಬ್ರುವರಿ 2022, 6:00 IST
ಅಕ್ಷರ ಗಾತ್ರ

ಕಲಬುರಗಿ: ಫರಹತಾಬಾದ್‌ ಪೊಲೀಸ್ ಠಾಣೆ ವ್ಯಾಪ್ತಿಯ ನದಿಸಿನ್ನೂರ ಖಾನಿ ಬಳಿ ಕೆಬಿಎನ್‌ ಶಿಥಲೀಕರಣ ಘಟಕದಲ್ಲಿ ಅಕ್ರಮವಾಗಿ ಗೋಮಾಂಸ ಹಾಗೂ ಇತರೆ ಪ್ರಾಣಿಗಳ ಮಾಂಸವನ್ನು ಸಂಗ್ರಹಿಸಿದ ಕುರಿತು ದೂರು ಬಂದ ಪ್ರಯುಕ್ತ ಪೊಲೀಸರು ಹಾಗೂ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಘಟಕದ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಗೋಹತ್ಯೆ ಮಾಡಲಾಗಿದ್ದು, ಎಲ್ಲಿ ವಧೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಅಲ್ಲದೇ, ಪಕ್ಕದಲ್ಲೇ ಭೀಮಾ ನದಿ ಇದ್ದು, ದನದ ಮಾಂಸದ ತ್ಯಾಜ್ಯವನ್ನು ನದಿಗೆ ಸುರಿಯುತ್ತಿರುವ ಶಂಕೆ ಇದೆ ಎಂದು ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯ ಹುಣಚಿರಾಯ (ಕೇಶವ) ಮೋಟಗಿ ಅವರು ಫರಹತಾಬಾದ್‌ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ದೂರನ್ನು ಆಧರಿಸಿ ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ಮಾಂಸವನ್ನು ಪ್ಯಾಕೆಟ್‌ಗಳಲ್ಲಿ ಸಂಗ್ರಹಿಸಲಾಗಿತ್ತು. ಕೆಬಿಎನ್‌ ಶಿಥಲೀಕರಣ ಘಟಕದ ಮಾಲೀಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT