ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಅಭಿವೃದ್ಧಿಯಲ್ಲಿ ರಾಜಕಾರಣ ಮಾಡಲ್ಲ’

Published : 30 ಜುಲೈ 2023, 15:18 IST
Last Updated : 30 ಜುಲೈ 2023, 15:18 IST
ಫಾಲೋ ಮಾಡಿ
Comments

ಕುಷ್ಟಗಿ: ಅಭಿವೃದ್ಧಿಯಲ್ಲಿ ರಾಜಕಾರಣ ಮಾಡುವುದಿಲ್ಲ. ಪಕ್ಷಕ್ಕೆ ಅಂಟಿಕೊಳ್ಳದೆ ನನಗೆ ಚುನಾವಣೆಯಲ್ಲಿ ಮತಹಾಕದಿರುವ ಮತದಾರರು ಸೇರಿದಂತೆ ಕ್ಷೇತ್ರದ ಎಲ್ಲ ಜನರನ್ನು ಪ್ರತಿನಿಧಿಸುವ ಶಾಸಕನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಭರವಸೆ ನೀಡಿದರು.

ತಾಲ್ಲೂಕಿನ ಹಂಚಿನಾಳ ಸೇರಿದಂತೆ ವಿವಿಧ ಹಳ್ಳಿಗಳಿಗೆ ಭಾನುವಾರ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಮುಗಿಯುವವರೆಗೆ ರಾಜಕಾರಣ. ನಂತರ ಎಲ್ಲ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗುತ್ತದೆ. ಅಭಿವೃದ್ಧಿಯಿಂದ ವ್ಯಕ್ತಿ ಅಥವಾ ಗ್ರಾಮಗಳು ವಂಚಿತಗೊಳ್ಳದಂತೆ, ಪಕ್ಷಭೇದ ಮರೆತು ಕ್ಷೇತ್ರದ ಶಾಸಕನಾಗಿ ಜನರ ಸಮಸ್ಯೆಗಳಿಗೆ ಧ್ವನಿಯಾಗುತ್ತೇನೆ ಎಂದರು.

ತಾಲ್ಲೂಕಿನ ಬಹಳಷ್ಟು ಗ್ರಾಮಗಳು ಅನೇಕ ವರ್ಷಗಳಿಂದ ಆರೋಗ್ಯ, ಶಿಕ್ಷಣ, ಗುಣಮಟ್ಟದ ರಸ್ತೆ ಸೇರಿದಂತೆ ಮೂಲಸೌಲಭ್ಯಗಳಿಂದ ವಂಚಿತ ಆಗಿರುವುದು ಕಂಡುಬಂದಿದೆ. ಚುನಾವಣೆ ಸಂದರ್ಭದಲ್ಲಿದ ಜನರಿಗೆ ಮಾತು ನೀಡಿದಂತೆ ಅಂತಹ ಪ್ರದೇಶ ಗುರುತಿಸಿ, ಹಂತ ಹಂತವಾಗಿ ಅಭಿವೃದ್ಧಿಪಥದತ್ತ ಕೊಂಡೊಯ್ಯಬೇಕಾಗಿದೆ. ಇಂತಹ ಅಗತ್ಯ ಸೌಲಭ್ಯಗಳ ಬಗ್ಗೆ ಜನ ಆದ್ಯತೆ ನೀಡಬೇಕು. ಮಂದಿರ, ಮಸೀದಿ ನಂತರದ ಬೇಡಿಕೆಯಾಗಲಿ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದು 2 ತಿಂಗಳು ಕಳೆದಿದ್ದು, ಈವರೆಗೆ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಹೇಶ ಮಾತನಾಡಿದರು. ನಂದಾಪುರ, ಕಳಮಳ್ಳಿ, ಕಳಮಳ್ಳಿ ತಾಂಡಾ, ಅಮರಾಪುರ, ಕಿಡದೂರು ಸೇರಿದಂತೆ ಅನೇಕ ಗ್ರಾಮಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯಾ ಊರುಗಳ ಪ್ರಮುಖರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT