ಕಲಬುರ್ಗಿ: ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಶನಿವಾರ ಏಕಕಾಲಕ್ಕೆ ನಡೆದ ಮೆಗಾ ಲೋಕ ಅದಾಲತ್‌ನಲ್ಲಿ ಜಿಲ್ಲೆಯಾದ್ಯಂತ ಒಟ್ಟು 18,341 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡವು. ₹ 23.95 ಕೋಟಿ ಮೊತ್ತದ ಪರಿಹಾರವನ್ನು ಕೊಡಿಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ಅದಾಲತ್‌ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ.ಸುಬ್ರಹ್ಮಣ್ಯ ಅವರ ಮಾರ್ಗದರ್ಶನದಲ್ಲಿ ಸಿವಿಲ್ ದಾವೆಗಳು, ಮೋಟಾರು ವಾಹನ, ಅಪಘಾತ ಪರಿಹಾರ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಭೂಸ್ವಾಧೀನ ಪರಿಹಾರ ವಸೂಲಾತಿ ಪ್ರಕರಣಗಳು, ಬ್ಯಾಂಕ್‌ಗಳಿಗೆ ಸಂಬಂಧಿಸಿದ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಸುಶಾಂತ ಎಂ. ಚೌಗಲೆ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.