ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿಗೆ ಮೆಗಾ ಜವಳಿ‌ ಪಾರ್ಕ್ ಮಂಜೂರು: ಡಾ.ಉಮೇಶ ಜಾಧವ

Last Updated 17 ಮಾರ್ಚ್ 2023, 10:12 IST
ಅಕ್ಷರ ಗಾತ್ರ

ಕಲಬುರಗಿ: ಕಲ್ಯಾಣ ‌ಕರ್ನಾಟಕದ ಬಹುದಿನಗಳ ಬೇಡಿಕೆಯಾಗಿದ್ದ‌ ಮೆಗಾ ಜವಳಿ ಪಾರ್ಕನ್ನು ಕೇಂದ್ರ ಸರ್ಕಾರ ಕಲಬುರಗಿಗೆ ಮಂಜೂರು ಮಾಡಿದೆ ಎಂದು ಸಂಸದ ಡಾ.ಉಮೇಶ ಜಾಧವ ತಿಳಿಸಿದ್ದಾರೆ.

ಆರು ತಿಂಗಳ ಹಿಂದೆ ಕೇಂದ್ರ ತಂಡವು ಕಲಬುರಗಿ ತಾಲ್ಲೂಕಿನ ಫಿರೋಜಾಬಾದ್ ಗ್ರಾಮದ ಬಳಿ ಮೀಸಲಿಟ್ಟಿದ್ದ ಒಂದು ಸಾವಿರ ಎಕರೆ ಜಮೀನನ್ನು ವೀಕ್ಷಿಸಿತ್ತು.

ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಜವಳಿ ಪಾರ್ಕ್ ಆರಂಭವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರ ಕಲಬುರಗಿ, ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸಬಹುದು ಎಂದು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.

ಫಿರೋಜಾಬಾದ್ ಹಾಗೂ ಹೊನ್ನಕಿರಣಗಿ ಸಮೀಪದ ಸಾವಿರ ಎಕರೆಯನ್ನು ಜಿಲ್ಲಾಡಳಿತ ಜವಳಿ ಇಲಾಖೆಗೆ ಹಸ್ತಾಂತರಿಸಿದೆ. ಜೊತೆಗೆ ಪ್ರಧಾನಿ ಕಚೇರಿಯಿಂದ ಜವಳಿ ಪಾರ್ಕ್ ಮಂಜೂರಾದ ಬಗ್ಗೆ ಜಿಲ್ಲಾಡಳಿತಕ್ಕೆ ಕರೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ ಬಳಿಕ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಡಾ.ಉಮೇಶ ಜಾಧವ, '2021ರ ಬಜೆಟ್ ಅಧಿವೇಶನದಲ್ಲಿ ಘೋಷಣೆ ಆಗಿದ್ದ ಬೃಹತ್ ಜವಳಿ ಪಾರ್ಕ್ (ಮೆಗಾ ಟೆಕ್ಸ್‌ಟೈಲ್ ಪಾರ್ಕ್) ಕಲಬುರಗಿಯಲ್ಲಿ ಸ್ಥಾಪನೆ ಆಗಬೇಕೆಂದು ಸತತ ಎರಡು ವರ್ಷದಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜೊತೆ ಅನುಸರಿಸಿದ ಫಲವಾಗಿ ಇಂದು ನಮ್ಮ ಪ್ರಧಾನಿಯವರು ದೇಶದಲ್ಲಿ ಏಳು ಜವಳಿ ಪಾರ್ಕ್ ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಲಬುರಗಿ ಕೂಡಾ ಒಂದಾಗಿದೆ. ಅದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ. ಈ ಬೃಹತ್ ಜವಳಿ ಪಾರ್ಕ್ ಈ ಭಾಗದ ಹತ್ತಿ ಬೆಳೆಯುವ ರೈತರು, ಯುವಕರು ಹಾಗೂ ಜವಳಿ ಉದ್ಯಮಿಗಳ ಪಾಲಿಗೆ ಒಂದು ವರದಾನ ಆಗಲಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT