ಖಾತ್ರಿ ಕೂಲಿ ಪಾವತಿ; ಕ್ರಮಕ್ಕೆ ಮನವಿ

7

ಖಾತ್ರಿ ಕೂಲಿ ಪಾವತಿ; ಕ್ರಮಕ್ಕೆ ಮನವಿ

Published:
Updated:

ಕಲಬುರ್ಗಿ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ ಸಂಪೂರ್ಣ ಕೂಲಿ ಹಣವನ್ನು ಪಾವತಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಉದ್ಯೋಗ ಖಾತ್ರಿ ಕಾಯಕ ಜೀವಿಗಳ ಸಂಘಟನೆ, ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಹಾಗೂ ಪ್ರಜ್ಞಾ ಕಾನೂನು ಸಲಹಾ ಸಮಿತಿ ವತಿಯಿಂದ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾನುವಾರ ಮನವಿಪತ್ರ ಸಲ್ಲಿಸಲಾಯಿತು.

ಕೂಲಿ ದಿನಗಳನ್ನು 200 ದಿನಕ್ಕೆ ಹೆಚ್ಚಿಸಬೇಕು. ₹249 ಕೂಲಿಯನ್ನು ₹500ಕ್ಕೆ ಹೆಚ್ಚಿಸಬೇಕು. ಉದ್ಯೋಗ ಖಾತ್ರಿ ಕಾಯ್ದೆಯನ್ನು ಪಟ್ಟಣಗಳಿಗೂ ವಿಸ್ತರಿಸಬೇಕು. ಕೂಲಿ ವಿಳಂಬವಾಗದಂತೆ ಮತ್ತು ಕೆಲಸದ ಅಳತೆ ಪ್ರಮಾಣದ ಕುರಿತಂತೆ ಇರುವ ತಾಂತ್ರಿಕ ದೋಷಗಳನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ‘ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಕಾಯ್ದೆಯನ್ನು ಕೊಲ್ಲಲು ಹೊರಟಿದೆ. ಬಜೆಟ್ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. 100 ದಿನ ಕಡ್ಡಾಯವಾಗಿ ಕೆಲಸ ದೊರೆಯಬೇಕು. ಆದರೆ, ಕೇಂದ್ರ ಸರ್ಕಾರ 45 ದಿನಗಳ ಕೂಲಿಯನ್ನೂ ಪಾವತಿಸುತ್ತಿಲ್ಲ. ಉದ್ಯೋಗ ಖಾತ್ರಿ ಕಾಯ್ದೆಯನ್ನು ಉಳಿಸಲು ಮತ್ತು ಕೂಲಿ ಪಾವತಿಗೆ ಕ್ರಮಕೈಗೊಳ್ಳುತ್ತೇನೆ’ ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ನೀಲಾ ಕೆ., ಜಿಲ್ಲಾ ಘಟಕದ ಅಧ್ಯಕ್ಷೆ ಚಂದಮ್ಮ ಗೋಳಾ, ಜಿಲ್ಲಾ ಕಾರ್ಯದರ್ಶಿ ನಂದಾದೇವಿ ಮಂಗೊಂಡಿ, ಪ್ರಜ್ಞಾ ಕಾನೂನು ಸಲಹಾ ಸಮಿತಿ ಅಧ್ಯಕ್ಷೆ ಡಾ.ಮೀನಾಕ್ಷಿ ಬಾಳಿ, ಉಪಾಧ್ಯಕ್ಷ ಡಾ.ಪ್ರಭು ಖಾನಾಪುರೆ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !