ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | 'ಗುಲಬರ್ಗಾ ವಿವಿಯಲ್ಲೇ ಪಿಎಚ್‌.ಡಿ ಗೈಡ್‌ಗಳಾಗಿ ಮುಂದುವರೆಸಿ'

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಕುಮಾರನಾಯ್ಕ್‌ಗೆ ಮನವಿ
Last Updated 14 ಏಪ್ರಿಲ್ 2022, 14:56 IST
ಅಕ್ಷರ ಗಾತ್ರ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧ್ಯಾಪಕರನ್ನು ಗುಲಬರ್ಗಾ ವಿಶ್ವವಿದ್ಯಾಲಯದಲ್ಲೇ ಪಿಎಚ್.ಡಿ ಮಾರ್ಗದರ್ಶಕರನ್ನಾಗಿ ಮುಂದುವರೆಸಬೇಕು ಎಂದು ಹೈದರಾಬಾದ್ ಕರ್ನಾಟಕ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳು ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ ನಾಯ್ಕ್ ಅವರಿಗೆ ಮನವಿಪತ್ರ ಸಲ್ಲಿಸಿದರು.

‘ರಾಯಚೂರು ವಿಶ್ವವಿದ್ಯಾಲಯವು ಪೂರ್ಣಪ್ರಮಾಣದವರೆಗೆ ಪ್ರಾರಂಭವಾಗುವವರೆಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಮಾರ್ಗದರ್ಶಕರನ್ನು ಮುಂದಿನ ಶೈಕ್ಷಣಿಕ ವರ್ಷದವರೆಗೆ ಮುಂದುವರೆಸುವುದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವಶ್ಯ. ಈ ಪ್ರಸ್ತಾವಕ್ಕೆ ರಾಯಚೂರು ವಿಶ್ವವಿದ್ಯಾಲಯವು ಒಪ್ಪಿಗೆ ನೀಡಿದೆ’ ಎಂದು ಅವರು ಕೋರಿದರು.

‘ಯಾದಗಿರಿ ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಲ್ಲಿ ಕೆಲ ಅಧ್ಯಾಪಕರು ಹಲವು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅವರು ಗುಲಬರ್ಗಾ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಮಾರ್ಗದರ್ಶಕರು ಆಗಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಪಿಎಚ್.ಡಿ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಯಾ ಕಾಲೇಜುಗಳು ರಾಯಚೂರು ವಿಶ್ವವಿದ್ಯಾಲಯದ ಸಂಲಗ್ನತೆ ಪಡೆದ ಕಾರಣ ಗುಲಬರ್ಗಾ ವಿಶ್ವವಿದ್ಯಾಲಯವು ಇವರಿಗೆ ಮಾರ್ಗದರ್ಶನ ಮಾಡಲು ನಿರಾಕರಿಸುತ್ತಿರುವುದು ಸರಿಯಾದ ಕ್ರಮವಲ್ಲ’ ಎಂದು ಅವರು ತಿಳಿಸಿದರು.

‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಯಚೂರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಪದವಿ ಕಾಲೇಜುಗಳಿಗೆ ಸ್ನಾತಕೋತ್ತರ ಕೋರ್ಸ್‌ ನಡೆಸಲು ಹಾಗೂ ಅರ್ಹ ಅಧ್ಯಾಪಕರಿಗೆ ಮಾರ್ಗದರ್ಶನ ಮಾಡಲು ಅನುಮತಿ ಕೊಡಬೇಕು. ರಾಯಚೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು. ಇಲ್ಲವೇ, ಪಿಎಚ್.ಡಿ ಪ್ರಕ್ರಿಯೆ ಆರಂಭಿಸುವವರೆಗೆ ಅಧ್ಯಾಪಕರುಗಳಿಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲೇ ಮಾರ್ಗದರ್ಶಕರನ್ನಾಗಿ ಮುಂದಿನ ಶೈಕ್ಷಣಿಕ ವರ್ಷದವರೆಗೆ ಮುಂದುವರೆಸಲು ಅನುಮತಿ ನೀಡಬೇಕು’ ಎಂದರು.

ಸಂಘದ ವಿಭಾಗೀಯ ಅಧ್ಯಕ್ಷ ಡಾ.ಶರಣಪ್ಪ ಸೈದಾ‍ಪುರ, ಪದಾಧಿಕಾರಿಗಳಾದ ಡಾ.ಚಿನ್ನಾ ಆಶಪ್ಪ, ಡಾ.ಶರಣಪ್ಪ ಗುಂಡಗುರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT