ಕಲಬುರ್ಗಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರುಸೆ. 28ರಂದು ನಗರ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಬೆಳಿಗ್ಗೆ 9 ಗಂಟೆಗೆ ಬಿಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಿ, ಮನವಿ ಸ್ವೀಕರಿಸುವರು. ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಮಾಜ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಹಾಗೂ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಮಧ್ಯಾಹ್ನ 3.30 ಗಂಟೆಗೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ಬಾಲಕ ಮತ್ತು ಬಾಲಕಿಯರ ವಸತಿ ಶಾಲಾ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.30 ಗಂಟೆಗೆ ಜೇವರ್ಗಿಯಿಂದ ರಸ್ತೆ ಮೂಲಕ ಬೀದರ್‌ಗೆ ಪ್ರಯಾಣಿಸುವರು.

ಸಚಿವರು ಮರಳಿ ಬೀದರ್‌ದಿಂದ ರಸ್ತೆ ಮೂಲಕ ಸೆ. 29ರಂದು ಮಧ್ಯಾಹ್ನ 4 ಗಂಟೆಗೆ ಕಲಬುರ್ಗಿಗೆ ಆಗಮಿಸಿ, ಅಂದು ಸಂಜೆ 4.25 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.