ಶುಕ್ರವಾರ, ಜೂನ್ 25, 2021
22 °C

ಕಲಬುರ್ಗಿ: ಸಚಿವ ಮುರುಗೇಶ ನಿರಾಣಿ ಪ್ರವಾಸ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್. ನಿರಾಣಿ ಅವರು ಶುಕ್ರವಾರ ಮೇ 7ರಂದು ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರ್ಗಿಗೆ ಬರುವರು.

ಬೆಳಿಗ್ಗೆ 11 ಗಂಟೆಗೆ ಸೇಡಂಗೆ ತೆರಳುವ ಸಚಿವರು, ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಕಲಬುರ್ಗಿಗೆ ಬಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 4.30 ಗಂಟೆಗೆ ಸಚಿವರು ಡಿ.ಸಿ ಕಚೇರಿಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ  ಸಭೆ ನಡೆಸುವರು.

ಸಂಜೆ 6.30 ಗಂಟೆಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡುವರು. ಮೇ 8ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಇಲಾಖೆಯ ಅಧಿಕಾರಿಗಳ ಸಭೆ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ತಾಲ್ಲೂಕು ಮಟ್ಟದ ಆರೋಗ್ಯಾಧಿಕಾರಿಗಳೊಂದಿಗೆ ಚರ್ಚೆ ನಡೆಸುವರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು