ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ ಜಿಲ್ಲೆಗೆ ಇಂದು ಸಚಿವ ನಿರಾಣಿ

Last Updated 24 ಜುಲೈ 2021, 4:34 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಮುರುಗೇಶ ಆರ್. ನಿರಾಣಿ ಅವರು ಬೆಂಗಳೂರಿಂದ ವಿಮಾನದ ಮೂಲಕ ಜುಲೈ 24ರಂದು ಬೆಳಿಗ್ಗೆ 9.45 ಗಂಟೆಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವ ಸಚಿವರು, ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳು ಕುರಿತು ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳ ಜೆತೆಗೆ ಸಭೆ ನಡೆಸುವರು.‌

ಮಧ್ಯಾಹ್ನ 2 ಗಂಟೆಗೆ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವ ಸಚಿವರು, ಸಂಜೆ 4.10 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT