ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಸಚಿವ ಇಂದು ನಗರಕ್ಕೆ

Last Updated 26 ಅಕ್ಟೋಬರ್ 2021, 4:43 IST
ಅಕ್ಷರ ಗಾತ್ರ

ಕಲಬುರಗಿ: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಅ. 26ರಂದು ಬೆಳಿಗ್ಗೆ 9.50 ಗಂಟೆಗೆ ಕಲಬುರಗಿಗೆ ಬರುವರು.

ಮೊದಲಿಗೆ ಸಚಿವರು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವರು. ನಂತರ ಕಲಬುರಗಿ ವಿಭಾಗದ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಸಭೆ ನಡೆಸುವರು. ಅದೇ ದಿನ ರಾತ್ರಿ 7.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಬೀದರ್‌ ಜಿಲ್ಲೆಯ ಭಾಲ್ಕಿಗೆ ಪ್ರಯಾಣಿಸುವರು.

ಅಕ್ಟೋಬರ್ 27ರಂದು ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ರಸ್ತೆ ಮೂಲಕ ಮಧ್ಯಾಹ್ನ 3.15 ಗಂಟೆಗೆ ಕಲಬುರಗಿಗೆ ಆಗಮಿಸುವರು. ನಂತರ ಮಧ್ಯಾಹ್ನ 3.40 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT