ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ನಾಲವಾರ ಶ್ರೀ ಆಶೀರ್ವಾದ ಪಡೆದ ಸಚಿವ

ಸಚಿವರಾದ ಬಳಿಕ ಮೊದಲ ಬಾರಿ ಜಿಲ್ಲೆಗೆ ಬಿ.ಸಿ.ನಾಗೇಶ್ ಭೇಟಿ
Last Updated 9 ಆಗಸ್ಟ್ 2021, 3:25 IST
ಅಕ್ಷರ ಗಾತ್ರ

ವಾಡಿ: ಸಚಿವ ಬಿ.ಸಿ. ನಾಗೇಶ ನಾಲವಾರ ಶ್ರೀಕೋರಿಸಿದ್ದೇಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯರ ಆಶೀರ್ವಾದ ಪಡೆದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಪ್ರಾಥಮಿಕ, ಫ್ರೌಢಶಿಕ್ಷಣ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ರವಿವಾರ ಮಠಕ್ಕೆ ಭೇಟಿ ನೀಡಿದ ಅವರು ಕೋರಿಸಿದ್ದೇಶ್ವರರ ಗದ್ದುಗೆಗೆ ಪೂಜೆ ಸಲ್ಲಿಸಿದರು. ನಂತರ ಶ್ರೀಗಳಿಂದ ಆಶಿರ್ವಾದ ಪಡೆದರು.

ಈ ವೇಳೆ ಮಾತನಾಡಿದ ಸಿದ್ದ ತೋಟೇಂದ್ರ ಶಿವಾಚಾರ್ಯರು, ಕೊವೀಡ್‌ನಿಂದ ಶೈಕ್ಷಣಿಕ ಜೀವನಕ್ಕೆ ಪೆಟ್ಟು ಬಿದ್ದಿದೆ. ವಿದ್ಯಾರ್ಥಿಗಳು ಅತಂತ್ರರಾ ಗಿದ್ದಾರೆ. ಬಾಲಕಾರ್ಮಿಕರಾಗಿರುವ ಉದಾಹರಣೆಗಳಿವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಮಾಜ ಸುಧಾರಣೆಗಾಗಿ ಸಿಕ್ಕ ಸಮಯ ಸದುಪಯೋಗ ಪಡಿಸಿಕೊಳ್ಳಿ ಎಂದರು.

ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಜಿ. ಬಾಸರೆಡ್ಡಿ, ಡಾ.ಶರಣ ಭೂಪಾಲರೆಡ್ಡಿ, ಗುರು ಕಾಮಾ, ಮಹೇಶ ವೀರಯ್ಯ ಸ್ವಾಮಿ ಚಿಂಚೋಳಿ, ಮಹಾದೇವ ಗಂವ್ಹಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT