ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇಡಂ: ಅಪಘಾತದ ಗಾಯಾಳುವನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ ಸಚಿವ

ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರು.
Published 18 ಮಾರ್ಚ್ 2024, 7:52 IST
Last Updated 18 ಮಾರ್ಚ್ 2024, 7:52 IST
ಅಕ್ಷರ ಗಾತ್ರ

ಸೇಡಂ (ಕಲಬುರಗಿ ಜಿಲ್ಲೆ): ಪಟ್ಟಣದ ಹೊರವಲಯದ ಪೂರ್ಣಾನಂದ ಹೋಟೆಲ್ ಸಮೀಪದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರು.

ಸಚಿವರು ಭಾನುವಾರ ರಾತ್ರಿ ಖಾಸಗಿ‌ ಕಾರ್ಯಕ್ರಮವನ್ನು ಮುಗಿಸಿಕೊಂಡು ಕಲಬುರಗಿ ಕಡೆ ತೆರಳುತ್ತಿದ್ದರು. ಸೇಡಂ-ಕಲಬುರಗಿ ರಾಜ್ಯ ಹೆದ್ದಾರಿ-10ರ ಪೂರ್ಣಾನಂದ ಹೋಟೆಲ್ ಸಮೀಪ ಅಪಘಾತ ಸಂಭವಿಸಿತು. ಕಲಬುರಗಿಯ ‌ಜಿಡಿಎ ಕಾಲೊನಿ‌ ನಿವಾಸಿ ವೀರಭದ್ರಯ್ಯ ನಾಗಯ್ಯ (38) ಅವರು ಗಾಯಗೊಂಡಿದ್ದರು. ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ಗಾಯಾಳುವನ್ನು ಗಮನಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ತಮ್ಮ ಕಾರಿನಲ್ಲಿ ಕೂರಿಸಿಕೊಂಡು ಸೇಡಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಟ್ರಾಮಾ ಸೆಂಟರ್‌ಗೆ ದಾಖಲಿಸುವಂತೆ ಸೂಚಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT