ಕಲಬುರಗಿ: ಭಾನುವಾರ ನಿಧನರಾದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸಚಿವ ಡಿ.ಸುಧಾಕರ್ ಅವರಿಗೆ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುಧಾಕರ್ ಅವರ ಚಿತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ರೇಣುಕಾ ಸಿಂಗೆ ಸೇರಿದಂತೆ ಹಲವು ಮುಖಂಡರು ಪುಷ್ಪ ನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಜಗದೇವ ಗುತ್ತೇದಾರ, ‘ಡಿ.ಸುಧಾಕರ್ ಅವರು ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ ಜನಸೇವೆ ಮಾಡಿದ್ದರು. ಹತ್ತಾರು ಒಳ್ಳೆಯ ಕೆಲಸ ಮಾಡಿದ್ದರು. ಜೊತೆಗೆ 20 ವರ್ಷ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದರು. ಅಂಥ ನಾಯಕರೊಬ್ಬರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ, ಅವರ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಅವರ ದೇವರು ಶಾಂತಿ ಕರುಣಿಸಲಿ,. ಅವರ ಕುಟುಂಬಕ್ಕೆ ದುಃಖ ಎದುರಿಸುವ ಶಕ್ತಿ ನೀಡಲಿ’ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಸುಭಾಸ ರಾಠೋಡ, ಭೀಮರಾವ ಟಿ.ಟಿ, ರಾಜಗೋಪಾಲ್ ರೆಡ್ಡಿ, ಅನಿಲಕುಮಾರ ಜಮಾದಾರ, ಸಾಹೇರಾಬಾನು, ಧರ್ಮರಾಜ ಹೇರೂರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.