ಕಲಬುರಗಿ: ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿದ್ದರ ವಿರುದ್ಧ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದ ವ್ಯಕ್ತಿಯನ್ನು ಕಲಬುರಗಿ ಹಾಗೂ ಬೆಂಗಳೂರಿನ ತಂಡ ಮಹಾರಾಷ್ಟ್ರದ ಲಾತೂರ್ ನಲ್ಲಿ ಗುರುವಾರ ವ್ಯಕ್ತಿಯೊಬ್ಬರನ್ನು ಬಂಧಿಸಿದೆ.

ಸೋಲಾಪುರ ಮೂಲದ ದಿನೇಶ್ ನರೋಣಿ ಬಂಧಿತ ವ್ಯಕ್ತಿ.

ಸಚಿವರಿಗೆ ಫೋನ್ ಕರೆ ಮಾಡಿದ ಬಳಿಕ ದಿನೇಶ ಸೊಲ್ಲಾಪುರದಿಂದ ಲಾತೂರ್ ಗೆ ಪರಾರಿಯಾಗಿದ್ದ.

ಫೋನ್ ಕರೆ ಬಂದ ಲೊಕೇಷನ್ ಆಧರಿಸಿ ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಗುರುವಾರ ರಾತ್ರಿ ಹೊತ್ತಿಗೆ ಪೊಲೀಸರು ಆರೋಪಿ ದಿನೇಶನನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.