ಕಾಲೇಜಿಗೆ ವಿಶ್ವವಿದ್ಯಾಲಯದ ಕಾನ್‌ಸ್ಟಿಟುವೆಂಟ್ ಕಾಲೇಜಿನ ಮಾನ್ಯತೆ ನೀಡಬೇಕು, ವಾಣಿಜ್ಯಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ ಹಾಗೂ ಕನ್ನಡ ಸ್ನಾತಕೋತ್ತರ ವಿಭಾಗಗಳಿಗೆ ಅಧ್ಯಯನ ಕೇಂದ್ರಗಳನ್ನು ಮಂಜೂರು ಮಾಡುವಂತೆ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಬೇಕು, ಕಾಲೇಜು ಭೂಮಿಯ ವಿವಾದ ಬಗೆಹರಿಸಬೇಕು, ಆಟದ ಮೈದಾನ ಒದಗಿಸಬೇಕು, ಇಪ್ಪತ್ತು ಬೋಧನಾ ಕೊಠಡಿಗಳನ್ನು ನಿರ್ಮಿಸಬೇಕು, ಎರಡು ಕಂಪ್ಯೂಟರ್ ಸೈನ್ಸ್ ಪ್ರಯೋಗಾಲಯ ಒದಗಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.