ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿ’

Last Updated 18 ಸೆಪ್ಟೆಂಬರ್ 2020, 3:38 IST
ಅಕ್ಷರ ಗಾತ್ರ

ಜೇವರ್ಗಿ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಡಾ.ಅಜಯಸಿಂಗ್ ಗುರುವಾರ ಇಲ್ಲಿ ಆರೋಪಿಸಿದರು.

ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ ಹಾಗೂ ಅತಿವೃಷ್ಟಿಯಿಂದ ಬೆಳೆಹಾನಿ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಅಲ್ಪಾವಧಿ ಹಾಗೂ ದೀರ್ಘಾವಧಿ ಬೆಳೆಗಳು ಸಂಪೂರ್ಣ ಹಾನಿಗೀಡಾಗಿವೆ. ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಬೆಳೆ ಹಾನಿಗೀಡಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರು ಪ್ರತಿ ವರ್ಷ ₹1 ಸಾವಿರ ಕೋಟಿ ಇದ್ದ ಅನುದಾನ 1,500 ಕೋಟಿಗೆ ಹೆಚ್ಚಿಸಿದ್ದರು. ಪ್ರಸಕ್ತ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 2 ಸಾವಿರ ಕೋಟಿ ಅನುದಾನ ಬಿಡುಗಡೆಗೊಳಿಸಬೇಕಾಗಿತ್ತು. ಆದರೆ ಇದ್ದ 1,500 ಕೋಟಿ ಅನುದಾನ ಬಿಡುಗಡೆಗೊಳಿಸದೆ ಇರುವುದರಿಂದ ಈ ಭಾಗದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿವೆ. ತಕ್ಷಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮರ್ಪಕವಾಗಿ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT