ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಆಮಿಷ: ಬಿ.ಆರ್‌. ಪಾಟೀಲ

Published 5 ಮಾರ್ಚ್ 2024, 13:27 IST
Last Updated 5 ಮಾರ್ಚ್ 2024, 13:27 IST
ಅಕ್ಷರ ಗಾತ್ರ

ಕಲಬುರಗಿ: ‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರೆ ಚುನಾವಣೆ ಮತ್ತು ವೈಯಕ್ತಿಕ ಖರ್ಚು ನೋಡಿಕೊಳ್ಳುತ್ತೇವೆ. ಮುಂದೆ ಅಧಿಕಾರಕ್ಕೆ ಬಂದರೆ ಮಂತ್ರಿಯನ್ನೂ ಮಾಡುವುದಾಗಿ ಬಿಜೆಪಿಯ ಜವಾಬ್ದಾರಿಯುತ ವ್ಯಕ್ತಿಯೊಬ್ಬರು ಆಮಿಷಯೊಡ್ಡಿದ್ದರು’ ಎಂದು ಮುಖ್ಯಮಂತ್ರಿ ರಾಜಕೀಯ ಸಲಹೆಗಾರ, ಆಳಂದ ಶಾಸಕ ಬಿ.ಆರ್‌. ಪಾಟೀಲ ಹೇಳಿದರು.

‘ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಗೆ ಸೇರಲು ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಆರೋಪಿಸಿದ್ದ ಬೆನ್ನಲ್ಲೇ ಇದೀಗ ಬಿ.ಆರ್‌. ಪಾಟೀಲ ಅವರೂ ಇದಕ್ಕೆ ಧ್ವನಿಗೂಡಿಸಿದ್ದಾರೆ.

ಇಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಎರಡು ತಿಂಗಳ ಹಿಂದೆ ಬಿಜೆಪಿಯ ಜವಾಬ್ದಾರಿಯುತ ಮುಖಂಡರೊಬ್ಬರು ನನ್ನನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ನಲ್ಲಿ ನಿಮಗೆ ಅನ್ಯಾಯವಾಗುತ್ತಿದೆ. ಅಲ್ಲಿಂದ ಹೊರ ಬನ್ನಿ. ಚುನಾವಣೆಯ ಖರ್ಚು ನೋಡಿಕೊಳ್ಳುತ್ತೇವೆ ಎಂದಿದ್ದರು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT