ಗುರುವಾರ , ಡಿಸೆಂಬರ್ 3, 2020
18 °C

ಮಾರುತಿ ಮಾನ್ಪಡೆ ಸಾವು: ಸದಾನಂದಗೌಡ ಹೇಳಿಕೆಗೆ ಪ್ರಿಯಾಂಕ ಖರ್ಗೆ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ‌ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕರಾದ ಪ್ರಿಯಾಂಕ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಅಸಮಧಾನ ಹೊರಹಾಕಿರುವ ಅವರು, ‘ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ಧ ಮಾನ್ಪಡೆಯವರು ಹೋರಾಡುತ್ತಲೇ ಬಂದಿದ್ದರು. ಆದರೆ ಮಾನ್ಪಡೆ ಸಾವಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ಕಾರಣ ಎಂಬ ಆರೋಪ ಸದಾನಂದಗೌಡರ ಮನಸ್ಥಿತಿ ತೋರಿಸುತ್ತದೆ’ ಎಂದಿದ್ದಾರೆ.

‘ಕೊರೊನಾ‌ದಂತ ಸಾಂಕ್ರಾಮಿಕ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರ್ಕಾರದ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ ಈಗ  ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು’ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ‌ ಸರಕಾರ‌ ಕೊಡುಗೆ ಏನು? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡವರನ್ನು ಶ್ರೀ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು