ಸೋಮವಾರ, ಆಗಸ್ಟ್ 2, 2021
20 °C

ಕಲಬುರ್ಗಿ | ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರದಲ್ಲೂ ಶಾಸಕರ ಕಟೌಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ವಾಡಿ ಪಟ್ಟಣದ ಸೆಂಟ್ ಆ್ಯಂಬ್ರೋಸ್ ಖಾಸಗಿ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಮುಂದೆ ಹಾಕಿದ ದ್ವಾರದ ಮೇಲೆ ಶಾಸಕ ಪ್ರಿಯಾಂಕ್ ಖರ್ಗೆ ಅವರ ದೊಡ್ಡ ಕಟೌಟ್ ಹಾಕುವ ಮೂಲಕ ಪರೀಕ್ಷಾ ಸಿಬ್ಬಂದಿ ಪಾಲಕರ ಕೆಂಗಣ್ಣಿಗೆ ಗುರಿಯಾದರು.

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಂಟ್ರನ್ಸ್ ಸ್ಯಾನಿಟೈಸರ್ ದ್ವಾರ ಅಳವಡಿಸಲಾಗಿದೆ. ಇದರ  ಮೇಲೆ ಶಾಸಕರ ಚಿತ್ರಪಟಗಳು ರಾರಾಜಿಸುತ್ತಿವೆ. ಸ್ಥಳೀಯರು ಇದರ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟರು.
 
ಕೇಂದ್ರದತ್ತ ಬಂದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಭಾವಚಿತ್ರ ತೆರವುಗೊಳಿಸಲು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು