ಮಂಗಳವಾರ, ಅಕ್ಟೋಬರ್ 20, 2020
21 °C

ಸಿ.ಎಂ. ಮಾತಿಗೆ ಬೆಲೆಕೊಟ್ಟ ತೆಲ್ಕೂರ: ಇಂದು ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ತಮಗೆ ನೀಡಲಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಹಿಂಜರಿದಿದ್ದ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಧಾನದ ಬಳಿಕ ಇದೇ 7ರಂದು ಹುದ್ದೆಯ ಕಾರ್ಯಭಾರ ವಹಿಸಿಕೊಳ್ಳಲು ಒಪ್ಪಿದ್ದಾರೆ.

ತೆಲ್ಕೂರ ಅವರು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹುದ್ದೆಯ ಆಕಾಂಕ್ಷಿಯಾಗಿದ್ದರು. ಆದರೆ, ಆ ಸ್ಥಾನ ಕಲಬುರ್ಗಿ ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರ ಪಾಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ತೆಲ್ಕೂರ, ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಆರಂಭದಲ್ಲಿ ನಿರಾಕರಿಸಿದ್ದರು. ಶನಿವಾರ ತೆಲ್ಕೂರ ಅವರನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಖುದ್ದು ಉಪಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರನ್ನು ಕಳಿಸಿಕೊಡುವುದಾಗಿ ಹೇಳಿದರು. ಅದರಂತೆ ಸವದಿ ಅವರು ಅಂದು ಬೆಳಿಗ್ಗೆ 10.30ಕ್ಕೆ ಅಥಣಿಯಿಂದ ಬರಲಿದ್ದು, ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.