ಮಂಗಳವಾರ, ಆಗಸ್ಟ್ 16, 2022
30 °C

ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂಚೋಳಿ: ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಡಾ. ಅವಿನಾಶ ಜಾಧವ ಗುರುವಾರ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು.

ಮನೆಗಳಿಗೆ ನೀರು ನುಗ್ಗಿ ಬದುಕು ದುಸ್ತರಗೊಂಡ ಜನರ ಬವಣೆ ಆಲಿಸಿ ಧೈರ್ಯ ತುಂಬಿದರು.

ಸರ್ಕಾರಕ್ಕೆ ಹಾನಿಯ ವರದಿ ಸಲ್ಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮತ್ತು ತಹಶೀಲ್ದಾರ್‌ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.
ಶಾಸಕರು ನಾಗಾಈದಲಾಯಿ, ದೇಗಲಮಡಿ, ಕಲ್ಲೂರು ರೋಡ, ಚಿಂಚೋಳಿ, ಕೊಳ್ಳೂರು ಮೊದಲಾದ ಕಡೆ ಭೇಟಿ ನೀಡಿದರು.

ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ ರಾಠೋಡ್, ಬಿಜೆಪಿ ಮುಖಂಡರಾದ ವೀರಾರೆಡ್ಡಿ ಪಾಟೀಲ, ಅಲ್ಲಮಪ್ರಭು ಹುಲಿ, ಜಗದೀಶಸಿಂಗ್ ಠಾಕೂರು, ವಿಶ್ವನಾಥ ಈದಲಾಯಿ, ಉದಯ ಸಿಂಧೋಲ, ರಾಕೇಶ ಗೋಸುಲ್  ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.