ಗುರುವಾರ , ಅಕ್ಟೋಬರ್ 29, 2020
21 °C

ಸೇಡಂ: ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ತೆಲ್ಕೂರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೇಡಂ: ತಾಲ್ಲೂಕಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಗುರುವಾರ ಭೇಟಿ ನೀಡಿ ಸಂತ್ರಸ್ತರ ಗೋಳು ಆಲಿಸಿದರು.

ಬಿಬ್ಬಳ್ಳಿ, ಸಟಪಟನಹಳ್ಳಿ, ಮಳಖೇಡ, ದರ್ಗಾ ಕಾಲೊನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ನೀರಿನಿಂದಾದ ಹಾನಿಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.  ಶೀಘ್ರದಲ್ಲಿ ಮಳೆ ಹಾನಿ ಸಿದ್ಧಪಡಿಸಿ ನೀಡಬೇಕು. ಯಾವುದೇ ವ್ಯಕ್ತಿ ಪ್ರವಾಹದಿಂದ ತೊಂದರೆ ಎದುರಿಸಬಾರದು. ಅವಶ್ಯಕತೆ ಇರುವ ಕಡೆಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದು ಜನರ ಜೀವ ರಕ್ಷಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಳಖೇಡ ಉತ್ತರಾಧಿ ಮಠದಲ್ಲಿ ಸಿಲುಕಿದ ಏಳು ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಶೀಘ್ರ ಕ್ರಮ ಕೈಗೊಳ್ಳಬೇಕು. ರೈತರ ಹಾಗೂ ನೀರು ನುಗ್ಗಿದ ಪ್ರದೇಶಗಳಿಗೆ ಸಂಬಂಧಪಟ್ಟ ಆಧಿಕಾರಿಗಳು ಭೇಟಿ ನೀಡಬೇಕು ಎಂದರು.

ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್, ಸಿಪಿಐ ರಾಜಶೇಖರ ಹಳಗೋದಿ, ಕಂದಾಯ ಅಧಿಕಾರಿ ಅಂಬರೀಷ್, ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಓಂಪ್ರಕಾಶ ಪಾಟೀಲ, ಜಗದೇವಪ್ಪ ಸಾಹುಕಾರ, ವೆಂಕಟೇಶ ಬೇಕರಿ, ಬನ್ನಪ್ಪ ಬಿ.ಕೆ, ಸಿದ್ದಪ್ಪ, ಮಲ್ಲಿಕಾರ್ಜುನ ಪಾಟೀಲ ಬೂತ್ಪೂರ, ಗುರು ತಳಕಿನ್, ಶರಣು ಆವಂಟಿ, ನಾಗರಾಜ ಹಾಬಾಳ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು