ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಕೆಆರ್‌ಡಿಬಿ ಯೋಜನೆಗಳಿಗೆ ಮನಸೋತ ಶಿಕ್ಷಕರು: ಅಜಯಸಿಂಗ್

ಈಶಾನ್ಯ ಪದವೀಧರ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲವು; ಡಾ. ಅಜಯಸಿಂಗ್ ಸಂತಸ
Published 7 ಜೂನ್ 2024, 15:57 IST
Last Updated 7 ಜೂನ್ 2024, 15:57 IST
ಅಕ್ಷರ ಗಾತ್ರ

ಕಲಬುರಗಿ: ಈಶಾನ್ಯ ಪದವೀಧರ ಮತಕ್ಷೇತ್ರದಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ ಡಾ.ಚಂದ್ರಶೇಖರ ಪಾಟೀಲರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ.

‘7 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ವರ್ಷದಿಂದ ಕೆಕೆಆರ್‌ಡಿಬಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿವೆ. ಮಂಡಳಿ ವತಿಯಿಂದ ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರ, ಯುವಕರಿಗಾಗಿ ಕೌಶಲ್ಯ ತರಬೇತಿ, ಪದವೀಧರರಿಗೆ ಅಕ್ಷರ ಮಿತ್ರ ಯೋಜನೆಯಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಲಾಗಿತ್ತು. ಇವುಗಳಿಗೆ ಪದವೀಧರರ, ಶಿಕ್ಷಕರ ಮನಸೂರೆಗೊಂಡಿವೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT