ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮತಎಣಿಕೆ ಕೇಂದ್ರದಲ್ಲಿ ಮೊಬೈಲ್‌ ಫೋನ್ ನಿಷೇಧ

Published 20 ಮೇ 2024, 14:27 IST
Last Updated 20 ಮೇ 2024, 14:27 IST
ಅಕ್ಷರ ಗಾತ್ರ

ಕಲಬುರಗಿ: ವಿಧಾನ ಪರಿಷತ್ತಿನ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಜೂನ್‌ 3ರಂದು ಮತದಾನ ನಡೆಯಲಿದ್ದು, ಜೂ. 6ರಂದು ಮತ ಎಣಿಕೆ ನಡೆಯಲಿದೆ.

ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಹೇಮರಡ್ಡಿ ಮಲ್ಲಮ್ಮ ಸಭಾಂಗಣದಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕೇಂದ್ರದಲ್ಲಿ ಬೆಂಕಿ ಪೊಟ್ಟಣ, ಲೈಟರ್, ಮೊಬೈಲ್ ಫೋನ್, ಸಿಗರೇಟ್, ಪಾನ್ ಬೀಡಾ, ತಂಬಾಕು ಹಾಗೂ ನೀರಿನ ಬಾಟಲ್ ಕೊಂಡೊಯ್ಯುವುದನ್ನು ಹಾಗೂ ವಿಶ್ವವಿದ್ಯಾಲಯದ ಆವರಣದಲ್ಲಿ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಿ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT