ಮಂಗಳವಾರ, ಅಕ್ಟೋಬರ್ 27, 2020
28 °C

ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ 416 ಅಂಗನವಾಡಿ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್ ಯೋಜನೆಯಡಿ ಆಶಾ, ಅಕ್ಕ, ಸ್ನೇಹಾ ಆ್ಯಪ್‌ (ASHA AKKA, SNEHA APP) ಬಳಕೆ ಮಾಡಲು ಹಾಗೂ ಪೋಷಣ ಮಾಸಾಚರಣೆಯನ್ನು ತಂತ್ರಾಂಶದಲ್ಲಿ ಅಳವಡಿಸಲು ಅನುಕೂಲವಾಗುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಫೋನ್ ಕಿಟ್ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಜಿ.ಎಸ್ ಗುಣಾರಿ ಅವರು ಈಚೆಗೆ ಸಾಂಕೇತಿಕವಾಗಿ ಕೆಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಕಿಟ್‌ಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂಗನವಾಡಿ ಕಾರ್ಯಕರ್ತರಿಗೆ ಸೆಪ್ಟೆಂಬರ್ 23ರಿಂದ 25ರವರೆಗೆ ಮೊಬೈಲ್ ಕಿಟ್ ವಿತರಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ ಹೇರೂರ ಅಂಗನವಾಡಿ ಕಾರ್ಯಕರ್ತೆಯರಿಗೆ ತಂತ್ರಾಂಶದಲ್ಲಿ ಮಾಹಿತಿ ಅಳವಡಿಸುವ ಬಗ್ಗೆ ತರಬೇತಿ ನೀಡಿದರು.

ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಭೀಮಸೇನ್ ಚವ್ಹಾಣ, ವಿಜಯಲಕ್ಷ್ಮೀ ಹೇರೂರ, ಹಿರಿಯ ಮೇಲ್ವಿಚಾರಕಿಯರು, ಮೇಲ್ವಿಚಾರಕಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.