ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗು ಮಾರಾಟ: ತಂದೆ ಬಂಧನ

Last Updated 23 ಮೇ 2018, 19:30 IST
ಅಕ್ಷರ ಗಾತ್ರ

ಕೊರಟಗೆರೆ: ಬಾಲ್ಯ ವಿವಾಹದಿಂದ ಜನಿಸಿದ ಮಗುವನ್ನು ಮಾರಾಟ ಮಾಡಿದ ತಾಲ್ಲೂಕಿನ ಬುಕ್ಕಾಪಟ್ಟಣದ ನವೀನ್ ಎಂಬಾತನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆತನ ವಿರುದ್ಧ ಪೋಕ್ಸೊ, ಬಾಲ್ಯವಿವಾಹ ನಿಷೇಧ ಹಾಗೂ ಶಿಶು ಮಾರಾಟ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ವಿವರ: ನವೀನ್ ಬಾಲಕಿಯೊಬ್ಬಳ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಆಕೆ ಗರ್ಭಿಣಿಯಾದಳು. ಈ ವಿಚಾರ ಎರಡೂ ಕುಟುಂಬಗಳಿಗೆ ತಿಳಿಯಿತು. ರಾಜಿ ಪಂಚಾಯಿತಿ ನಡೆದು ಇಬ್ಬರಿಗೂ ವಿವಾಹವಾಯಿತು. ತುಮಕೂರಿನ ಆಸ್ಪತ್ರೆಗೆ ಹೆರಿಗೆಗೆ ಹೋಗಿದ್ದಾಗ ಆಸ್ಪತ್ರೆ ಸಿಬ್ಬಂದಿ ಬಾಲಕಿಯ ವಿಳಾಸ ಹಾಗೂ ಹುಟ್ಟಿದ ದಿನಾಂಕ ಪಡೆದಿದ್ದಾರೆ. ಇವರದ್ದು ಬಾಲ್ಯ ವಿವಾಹ ಎನ್ನುವುದು ಗಮನಕ್ಕೆ ಬಂದಿದೆ. ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಆಸ್ಪತ್ರೆ ಸಿಬ್ಬಂದಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಈ ವಿಷಯ ತಿಳಿಸಿದ್ದಾರೆ. ‘ಬಾಲ್ಯ ವಿವಾಹವನ್ನು ಮರೆಮಾಚಲು ಮತ್ತು ಭಯದಿಂದ ನವೀನ್ ಹಾಗೂ ಪೋಷಕರು ಶಿಶುವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ನವೀನ್ ಪೋಷಕರಾದ ಸಣ್ಣಮ್ಮ ಹಾಗೂ ಗಂಗಾಧರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT