ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾಪುರ: ಬೆಣ್ಣೆತೊರೆ ಜಲಾಶಯದಿಂದ ನೀರು ಬಿಡುಗಡೆ

Last Updated 13 ಜುಲೈ 2022, 8:32 IST
ಅಕ್ಷರ ಗಾತ್ರ

ಕಮಲಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಬೆಣ್ಣೆತೊರೆ ಜಲಾಶಯದಿಂದ ಬುಧವಾರ 200 ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ.

ಬೆಣ್ಣೆತೊರೆ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸದ್ಯ 700 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇಂದಿನಿಂದ ಒಳ ಹರಿವು ಮತ್ತಷ್ಟು ಹೆಚ್ಚಾಗಲಿದೆ.

ಈಗಾಲೇ ಶೇ 70 ರಷ್ಟು ನೀರು ಸಂಗ್ರಹಗೊಂಡಿದ್ದು, ಜಲಾಶಯ ಭರ್ತಿಯಾಗುವ ಹಂತದಲ್ಲಿದೆ. ಹೀಗಾಗಿ ಬೆಣ್ಣೆತೊರೆಯಿಂದ ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ.

ನದಿ ತೀರದ ಗ್ರಾಮಗಳಿಗೆ ಪ್ರವಾಹದಿಂದ ತೊಂದರೆ ಉಂಟಾಗಬಹುದು. ಸಾರ್ವಜನಿಕರು ಈಜಲು, ಬಟ್ಟೆ ತೊಳೆಯಲು, ಜಾನುವಾರುಗಳಿಗೆ ನೀರು ಕುಡಿಸಲು ಸೇರಿದಂತೆ ಬೇರೆ ಯಾವುದೇ ಕಾರಣಕ್ಕೂ ನದಿಗೆ ಇಳಿಯಬಾರದು. ರೈತರು, ಸಾರ್ವಜನಿಕರು, ಸಣ್ಣ ನೀರಾವರಿ ಇಲಾಖೆ, ನೀರು ಸರಬರಾಜಿಗೆ ಸಂಬಂಧಿಸಿದ ಆಸ್ತಿಗಳಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಒಯ್ಯಬೇಕು. ಮುಂಜಾಗ್ರತೆ ವಹಿಸಬೇಕು ಎಂದು ಸಹಾಯಕ ಇಂಜಿನಿಯರ್ ವೀರೇಶ್ ಜೀರ್ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT