ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡಪ್ರಮಾಣ ಪತ್ರ ನೀಡಲು ಸಂಸದ ಮನವಿ

Last Updated 23 ಜುಲೈ 2020, 16:15 IST
ಅಕ್ಷರ ಗಾತ್ರ

ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದ ತಳವಾರ ಸಮುದಾಯಕ್ಕೆ ‘ಪರಿಶಿಷ್ಟ ಪಂಗಡ’ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು’ ಎಂದು ಸಂಸದ ಡಾ.ಉಮೇಶ ಜಾಧವ ಅವರು ಉಪಮುಖ್ಯಮಂತ್ರಿ ಗೋವಿಂದ ಕಾರಕೋಳ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

‘ಸದ್ಯ ತಳವಾರ ಸಮುದಾಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ–01ಕ್ಕೆ ಸೇರಿದ ಪ್ರಮಾಣ ಪತ್ರ ನೀಡಲಾಗುತ್ತಿದೆ. ಆದರೆ, ಈ ಸಮಾಜವು ಸಾಂವಿಧಾನಿಕವಾಗಿ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಸೇರಿದೆ. ಆದ್ದರಿಂದ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಸಮಾಜದವರು ನನಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನು ಪರಿಶೀಲಿಸಲಾಗಿ, ಈ ಭಾಗದಲ್ಲಿ ವಾಸಿಸುತ್ತಿರುವ ತಳವಾರ ಸಮುದಾಯವರು ತೀವ್ರ ಹಿಂದುಳಿದಿದ್ದು ಕಂಡುಬರುತ್ತದೆ. ಹಲವು ಸರ್ಕಾರಿ ಸೌಕರ್ಯಗಳಿಂದಲೂ ವಂಚಿತವಾಗಿದೆ. ಸಮಾಜವನ್ನು ಮುಖ್ಯ ವಾಹಿಣಿಗೆ ತರುವುದು ಅಗತ್ಯವಾಗಿದೆ. ಆದ್ದರಿಂದ ಕೂಡಲೇ, ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದವರಿಗೆ ಆದೇಶ ನೀಡಬೇಕು’ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT