ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಪಾಸ್‌: ಶೀಘ್ರ ವಿಸ್ತೃತ ವರದಿ ನೀಡಿ

ವಲಯ ಅಧಿಕಾರಿಗಳಿಗೆ ಸೂಚನೆ ನೀಡಿದ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಹಾನಿರ್ದೇಶಕ
Last Updated 2 ಮಾರ್ಚ್ 2022, 4:17 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ಬೈಪಾಸ್‌ ರಸ್ತೆ (ಎರಡನೇ ರಿಂಗ್‌ ರಸ್ತೆ)ಗೆ ಸಂಬಂಧಿಸಿದಂತೆ ವಿಸ್ತೃತವಾದ ವರದಿಯನ್ನು ಶೀಘ್ರ ಸಲ್ಲಿಸಬೇಕು ಎಂದು ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಹಾನಿರ್ದೇಶಕ ರವಿ ಪ್ರಸಾದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಸದ ಡಾ.ಉಮೇಶ ಜಾಧವ ಅವರ ನೇತೃತ್ವದಲ್ಲಿ ಬೆಂಗಳೂರಿನಕುಮಾರಕೃಪಾ ಅತಿಥಿಗೃಹದಲ್ಲಿ ಮಂಗಳವಾರ ನಡೆದ ಮಹತ್ವದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಬೈಪಾಸ್‌ ರಸ್ತೆಗೆ ಸಂಬಂಧಿಸಿದ ಭೂಸ್ವಾಧೀನ, ವೆಚ್ಚ ಮುಂತಾದ ವಿವರಗಳನ್ನು ಒಳಗೊಂಡ ವರದಿಯನ್ನು ಕೂಡಲೇ ನೀಡಬೇಕು ಎಂದು ರವಿ ಪ್ರಸಾದ ಅವರು, ಲೋಕೋಪಯೋಗಿ ಇಲಾಖೆಯ ಕಲಬುರಗಿ ವಲಯದ ಅಧಿಕಾರಿಗಳಿಗೆ ತಿಳಿಸಿದರು.‌

ಸಭೆಯಲ್ಲಿ ಮಾತನಾಡಿದ ಸಂಸದ ಡಾ.ಜಾಧವ, ಕಲಬುರಗಿ ಬೈಪಾಸ್‌ ರಸ್ತೆಯ ಮಹತ್ವ ಹಾಗೂ ಅನಿವಾರ್ಯ ಕಾರಣಗಳನ್ನು ಬಿಚ್ಚಿಟ್ಟರು. ಜತೆಗೆ,ಹುಮನಾಬಾದ್‌ ಹಾಗೂ ಆಳಂದ ರಸ್ತೆಯಲ್ಲಿ ‘ಫ್ಲೈಓವರ್‌’ ನಿರ್ಮಾಣ ಮಾಡುವ ಬಗ್ಗೆಯೂ ಅವರು ಅಧಿಕಾರಿಗಳ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ರವಿ ಪ್ರಸಾದ, ಆದಷ್ಟು ಬೇಗ ಫ್ಲೈಓವರ್‌ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT