ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ರೈಲ್ವೆ ಸೌಲಭ್ಯ ಹೆಚ್ಚಿಸಲು ಮನವಿ

Published 3 ಜನವರಿ 2024, 14:13 IST
Last Updated 3 ಜನವರಿ 2024, 14:13 IST
ಅಕ್ಷರ ಗಾತ್ರ

ಕಲಬುರಗಿ: ಕಲಬುರಗಿ ನಗರ ಹಾಗೂ ಲೋಕಸಭಾ ವ್ಯಾಪ್ತಿಯಲ್ಲಿ  ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸುವಂತೆ ನಾಗರಿಕರಾದ ಸಾಯೀಂದ್ರ ಕುಮಾರ ದೇಶಪಾಂಡೆ ಹಾಗೂ ರಾಘವೇಂದ್ರ ರಾವ್ ಕುಲಕರ್ಣಿ ಅವರು ಸಂಸದ ಡಾ. ಉಮೇಶ ಜಾಧವ ಅವರ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಡಿಸೆಂಬರ್ 30ರಂದು ಪತ್ರ ಬರೆದಿರುವ ಅವರು, ‘10 ವರ್ಷಗಳ ಹಿಂದೆ ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಮಂಜೂರಾಗಿದ್ದು ಹೊರತುಪಡಿಸಿದರೆ ಹೆಚ್ಚಿನ ಕೆಲಸಗಳು ಆಗಿಲ್ಲ. ದಶಕದ ಹಿಂದೆಯೇ ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ರೈಲ್ವೆ ಕೋಚ್ ಕಾರ್ಖಾನೆ ಮಂಜೂರಾಗಿದೆ. ಆದರೆ ಇನ್ನೂ ಕಾರ್ಯಾರಂಭ ಮಾಡಿಲ್ಲ. ಹಲಕರ್ಟಿ ಸ್ಟೇಷನ್‌ಗೆ ತೆರಳುವ ರೈಲುಗಳನ್ನು ವಾಡಿ ಜಂಕ್ಷನ್‌ಗೂ ಬರುವಂತೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಬೀದರ್‌ನಿಂದ ಯಶವಂತಪುರಕ್ಕೆ ಪ್ರತಿ ಭಾನುವಾರ ಓಡಾಡುವ ರೈಲನ್ನು ಪ್ರತಿದಿನ ಓಡಿಸಬೇಕು. ಕಲಬುರಗಿಯಿಂದ ಬೆಂಗಳೂರಿಗೆ ಇನ್ನೊಂದು ರೈಲು ಮಂಜೂರು ಮಾಡಬೇಕು. ಇನ್ನೂ ಎರಡು ಹೊಸ ರೈಲುಗಳನ್ನು ಮಂಜೂರು ಮಾಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT