ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಯದೇವ ಆಸ್ಪತ್ರೆಗೆ ದಾಖಲಾದ ಸಂಸದ ಡಾ.ಜಾಧವ

Last Updated 28 ಸೆಪ್ಟೆಂಬರ್ 2020, 19:50 IST
ಅಕ್ಷರ ಗಾತ್ರ

ಕಲಬುರ್ಗಿ: ಎದೆ ನೋವಿನ ಕಾರಣಕ್ಕಾಗಿ ಸಂಸದ ಡಾ.ಉಮೇಶ ಜಾಧವ ಅವರು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ. ಇತ್ತೀಚೆಗಷ್ಟೇ ಕೋವಿಡ್‌–19ನಿಂದ ಚೇತರಿಸಿಕೊಂಡಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ಡಾ.ಜಾಧವ, ‘ಬೆಳಿಗ್ಗೆ ಸಣ್ಣ ಪ್ರಮಾಣದ ಎದೆ ನೋವು ಬಂದಿದ್ದರಿಂದ ಜಯದೇವ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದೆ. ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ ಅವರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಯಾರೂ ಗಾಬರಿಯಾಗುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT