ಬುಧವಾರ, ಸೆಪ್ಟೆಂಬರ್ 29, 2021
20 °C

ಸಹೋದರಿಯರ ಕೊಲೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈಚೆಗೆ ನಡೆದ ಸಹೋದರಿಯರ ಕೊಲೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಗೌರಮ್ಮನ ಪತಿ ಮಂಜುನಾಥ (37) ಬಂಧಿತ. ಗೌರಮ್ಮಳ ಮೇಲೆ ಸಂಶಯಪಟ್ಟು ಮಂಜುನಾಥ ಮಚ್ಚಿನಿಂದ ಕೊಲೆ ಮಾಡಿದ್ದಾನೆ. ಕೊಲೆಯಾದ ಸಂದರ್ಭ ರಾಧಮ್ಮಳು ಎಚ್ಚರಗೊಂಡಿದ್ದರಿಂದ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ.

ಬೆಂಗಳೂರಿನ ಚಂದಾಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು