ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರೀಯ ವಿ.ವಿ.ಯಲ್ಲಿ ಪರಂಪರಾ ಮ್ಯೂಸಿಯಂ ಸ್ಥಾಪನೆ: ಮಹೇಶ್ವರಯ್ಯ

Last Updated 10 ಜುಲೈ 2020, 8:12 IST
ಅಕ್ಷರ ಗಾತ್ರ

ಕಲಬುರ್ಗಿ: ‘ಜಿಲ್ಲೆಯ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ‘ಕಲ್ಯಾಣ ಕರ್ನಾಟಕದ ಇತಿಹಾಸ, ಕಲೆ, ಸಾಂಸ್ಕೃತಿಕ, ಸಾಹಿತ್ಯ ಸೇರಿ ಪರಂಪರಾ (ಹೆರಿಟೇಜ್) ಮ್ಯೂಸಿಯಂ’ ಸ್ಥಾಪಿಸಲು ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಂ. ಮಹೇಶ್ವರಯ್ಯ ಹೇಳಿದರು.

ನಗರದಲ್ಲಿ ಕೊತ್ತಲ‌ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಹಾಗೂ ವಿಕಾಸ ಅಕಾಡೆಮಿ ಆಶ್ರಯದಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಕಲಬುರ್ಗಿ ಮಹಾನಾಗರಿಕ ಸಮಿತಿ ಹಾಗೂ ಮಹಾನಗರ ಸೇವಾ ಸಮಿತಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ನಮ್ಮ ಭಾಗದ ಇತಿಹಾಸ, ಶರಣರ ಕೊಡುಗೆ ಮುಂದಿನ ಜನಾಂಗಕ್ಕೆ ಕೊಂಡೊಯ್ಯಲು ಹಾಗೂ ಈ ಭಾಗದ ಅಭಿವೃದ್ಧಿಗೆ ಪೂರಕ ನಿಟ್ಟಿನಲ್ಲಿ ₹ 25 ಕೋಟಿ ವೆಚ್ಚದ ಹೆರಿಟೇಜ್ ಮ್ಯೂಸಿಯಂ ಸ್ಥಾಪಿಸಲು ಅನುದಾನ ಕೋರಿ ಈಗಾಗಲೇ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ನೀಡಿದಲ್ಲಿ ಮಾದರಿಯ ಮ್ಯೂಸಿಯಂ ಸ್ಥಾಪನೆಯಾಗುತ್ತದೆ; ಎಂದು ವಿವರಣೆ ನೀಡಿದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಮಾತನಾಡಿ, ‘ಕಲಬುರ್ಗಿ ಮುಂದಿನ 25 ವರ್ಷಗಳ ಅಭಿವೃದ್ಧಿಯನ್ನು ಕಣ್ಣೋಟದಲ್ಲಿ ಇಟ್ಟುಕೊಂಡು ಸಮಿತಿಗಳು ಕಾರ್ಯ ನಿರ್ವಹಿಸಬೇಕಿದೆ. ಸೇವಾ ಮನೋಭಾವ ಎಲ್ಲರಲ್ಲೂ ಬರುವುದು ಅಗತ್ಯವಿದೆ’ ಎಂದು ಹೇಳಿದರು.

ಶರಣಬಸವೇಶ್ವರರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಿತಿಯ ಪದಾಧಿಕಾರಿಗಳಾದ ಶಾಂತಕುಮಾರ ಬಿಲಗುಂದಿ, ರವಿ ಮುಕ್ಕಾ, ಸುಭಾಷ ಕಮಲಾಪುರೆ, ಉಮಾಕಾಂತ ನಿಗ್ಗುಡಗಿ, ಚಂದ್ರಶೇಖರ ತಳ್ಳಳ್ಳಿ, ಶಾಂಂತರೆಡ್ಡಿ, ಮಾರ್ತಾಂಡ ಶಾಸ್ತ್ರೀ, ಉಮೇಶ ಶೆಟ್ಟಿ, ಬಸವರಾಜ ಖಂಡೇರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT