ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗರಾಳ ಜಲಾಶಯದಿಂದ 800 ಕ್ಯುಸೆಕ್ ನೀರು, ನದಿ ಪಾತ್ರದವರಿಗೆ ಎಚ್ಚರಿಕೆ ರವಾನೆ

Last Updated 13 ಜುಲೈ 2021, 8:45 IST
ಅಕ್ಷರ ಗಾತ್ರ

ಚಿಂಚೋಳಿ(ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಕೆಳದಂಡೆ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯದಿಂದ 800 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 491ಮೀಟರ್ ಆಗಿದ್ದು ಸದ್ಯ ಜಲಾಶಯದಲ್ಲಿ 489.2 ಮೀಟರ್ ಇದೆ.

ಜಲಾಶಯದಿಂದ ನದಿಗೆ ನೀರು ಬಿಡುತ್ತಿರುವುದರಿಂದ ಮುಲ್ಲಾಮಾರಿ ನದಿಯಲ್ಲಿ ಪ್ರವಾಹ ಉಂಟಾಗಲಿದೆ. ಕಳೆದ ಮೂರು ದಿನಗಳಿಂದ 130 ಕ್ಯುಸೆಕ್ ಹಾಗೂ 60 ಕ್ಯುಸೆಕ್ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದೆ. ಸೋಮವಾರ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಮತ್ತು ಹುಮನಾಬಾದ ತಾಲ್ಲೂಕುಗಳಲ್ಲಿ ಭಾರಿ ಮಳೆ ಸುರಿದ ಕಾರಣ ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ ಎಂದು ಯೋಜನೆಯ ಎಇಇ ಹಣಮಂತ ಪೂಜಾರಿ ತಿಳಿಸಿದ್ದಾರೆ.

ನದಿಗೆ ನೀರು ಬಿಡುತ್ತಿರುವುದರಿಂದ ನದಿ ಪಾತ್ರದ ಚಿಂಚೋಳಿ ಚಂದಾಪುರ ಅವಳಿ ಪಟ್ಟಣದಲ್ಲಿ ಜನರು ಜಾಗೃತರಾಗಿರಬೇಕೆಂದು ಪುರಸಭೆಯ ಮೂಲಕ ಜನರಿಗೆ ತಿಳಿಸಲಾಗಿದೆ.

ನದಿ ದಂಡೆಯ ಮೇಲಿರುವ ಗ್ರಾಮಗಳ ಜನರು ಎಚ್ಚರದಿಂದಿರಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT