ಭಾನುವಾರ, ಮೇ 16, 2021
22 °C

ಕಲಬುರ್ಗಿ: ನಳಿನಿತಾಯಿ ಅಪ್ಪ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ನಳಿನಿತಾಯಿ ಬಸವರಾಜಪ್ಪ ಅಪ್ಪ (79) ಅವರು ಶನಿವಾರ
ನಸುಕಿನಲ್ಲೊ ನಿಧನರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ನಳಿನಿತಾಯಿ ಅವರು ಸಂಸ್ಥಾನದ ಬಸವರಾಜಪ್ಪ ಅಪ್ಪ ಅವರ ಪತ್ನಿ. ಅವರಿಗೆ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಗೌರವ ಅಧ್ಯಕ್ಷ ಲಿಂಗರಾಜಪ್ಪ ಅಪ್ಪ ಸೇರಿದಂತೆ ಇಬ್ಬರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ.

ಪತಿಯ ಜತೆಗೂಡಿ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿದ್ದರು. ಗೋದುತಾಯಿ ನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನ ಬಳಿಕ ಶರಣಬಸವೇಶ್ವರರ ತೋಟದಲ್ಲಿ (ಅಪ್ಪನವರ ತೋಟದಲ್ಲಿ) ಲಿಂಗಾಯತ ವಿಧಿ ವಿಧಾನಗಳಂತೆ ಅಂತ್ಯಕ್ರಿಯೆ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.