ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕರೂಪದ ಬೇಸಿಗೆ ರಜೆ ಘೋಷಿಸಿ: ಶಶೀಲ್ ನಮೋಶಿ

Last Updated 22 ಏಪ್ರಿಲ್ 2021, 5:34 IST
ಅಕ್ಷರ ಗಾತ್ರ

ಕಲಬುರ್ಗಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೇ 1ರಿಂದ ಬೇಸಿಗೆ ರಜೆ ಘೋಷಿಸಿರುವ ಶಿಕ್ಷಣ ಇಲಾಖೆ, ಪ್ರೌಢಶಾಲಾ ಶಿಕ್ಷಕರಿಗೆ ಜೂನ್ 15ರಿಂದ ಜುಲೈ 14ರವರೆಗೆ ರಜೆ ಘೋಷಿಸಿದೆ. ಈ ರೀತಿ ಹಿಂದೆಂದೂ ಆಗಿರಲಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ರಜೆ ಘೋಷಿಸಿದ ಸಮಯದಲ್ಲಿಯೇ ಪ್ರೌಢಶಾಲಾ ಶಿಕ್ಷಕರಿಗೂ ರಜೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರಿಗೆ ಪತ್ರ ಬರೆದಿರುವ ನಮೋಶಿ, ಪ್ರೌಢಶಾಲಾ ಶಿಕ್ಷಕರು ಕೋವಿಡ್‌–19 ಭೀಕರ ಸ್ವರೂಪ ಪಡೆದಿರುವ ಈ ಸಂದರ್ಭದಲ್ಲಿ ಬೇಸಿಗೆ ರಜೆ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ, ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೀಡಲಾದ ದಿನಾಂಕದಲ್ಲಿಯೇ ಇವರಿಗೂ ಬೇಸಿಗೆ ರಜೆ ಮಂಜೂರು ಮಾಡಬೇಕು ಎಂದಿದ್ದಾರೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್ 21ರಂದು ಆರಂಭಗೊಂಡು ಜುಲೈ 5ರವರೆಗೆ ನಡೆಯಲಿದೆ. ಹಾಗಾಗಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ಎಲ್ಲ ಆರೂ ವಿಷಯಗಳ ಶಿಕ್ಷಕರು ಶಾಲೆಯಲ್ಲಿ ಹಾಜರಿರಬೇಕಾಗುತ್ತದೆ. ಬಳಿಕ ಮೌಲ್ಯಮಾಪನದಲ್ಲಿ ಭಾಗವಹಿಸಬೇಕು. ಹಾಗಾಗಿ, ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸದಲ್ಲಿಯೇ ರಜೆ ಮುಗಿದು ಹೋಗುತ್ತದೆ. ಬೇಸಿಗೆ ರಜೆ ಘೋಷಿಸುವ ವಿಷಯದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸರ್ಕಾರದ ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಹಿಂದೆಂದೂ ಹೀಗೆ ಆಗಿರಲಿಲ್ಲ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಏಕರೂಪದ ರಜೆ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT