ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಲೋಕಾಯುಕ್ತ ಬಲೆಗೆ ನಂದರಗಿ ಗ್ರಾಮ ಲೆಕ್ಕಾಧಿಕಾರಿ

Published : 12 ಆಗಸ್ಟ್ 2024, 10:34 IST
Last Updated : 12 ಆಗಸ್ಟ್ 2024, 10:34 IST
ಫಾಲೋ ಮಾಡಿ
Comments

ಕಲಬುರಗಿ: ಜಮೀನಿನ ಮ್ಯುಟೇಶನ್ ಮಾಡಿಕೊಡಲು ರೈತರೊಬ್ಬರಿಂದ ₹ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅಫಜಲಪುರ ತಾಲ್ಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ (ವಿ.ಎ) ಸಿದ್ದರಾಮ ಪಡಶೆಟ್ಟಿ ಎಂಬುವವರನ್ನು ಸೋಮವಾರ ಬಂಧಿಸಿದ್ದಾರೆ.

ಅಫಜಲಪುರ ತಾಲ್ಲೂಕಿನ ದುದ್ದಣಗಿ ಗ್ರಾಮದ ಸೈಫನ್ ಸಾಬ್ ಅಜೀಜ್ ನಾಕೇದಾರ ಎಂಬುವವರು ಮ್ಯುಟೇಶನ್ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಲು ಸಿದ್ದರಾಮ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸೈಫನ್‌ ಸಾಬ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 

ಅಫಜಲಪುರ ತಹಶೀಲ್ದಾರ್ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಗಂಗಲ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್ ಧ್ರುವತಾರಾ ಅವರು ಆರೋಪಿಯನ್ನು ಬಂಧಿಸಿದರು. 

ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಹಣಮಂತ, ಮಸೂದ್, ಶರಣು ಈ ಸಂದರ್ಭದಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT