ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜೂನ್ 26 ಮತ್ತು 27ರಂದು ‘ಡಾ. ಬಿ.ಆರ್.ಅಂಬೇಡ್ಕರ್ ಅವರ ಪರಂಪರೆ: 21ನೇ ಶತಮಾನದ ಸವಾಲುಗಳು’ ಕುರಿತು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ವಿವಿಯ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಚಂದ್ರಕಾಂತ ಯಾತನೂರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಫೌಂಡೇಷನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಜೂನ್ 26ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ದೆಹಲಿಯ ಜವಾಹರಲಾಲ್ ನೆಹರೂ ವಿವಿ ಹಿರಿಯ ಪ್ರಾಧ್ಯಾಪಕ ಪ್ರೊ. ನರೇಂದ್ರಕುಮಾರ ಮುಖ್ಯ ಭಾಷಣಕಾರರು. ಶಾಸಕ ಬಸವರಾಜ ಮತ್ತಿಮಡು ಉದ್ಘಾಟಿಸುವರು. ಕುಲಪತಿ ಪ್ರೊ.ಗೂರು ಶ್ರೀರಾಮುಲು ಅಧ್ಯಕ್ಷತೆ ವಹಿಸುವರು. ಹಲವರು ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ದೇಶದ ವಿವಿಧ ವಿಶ್ವವಿದ್ಯಾಲಯಗಳಿಂದ 10ಕ್ಕೂ ಅಧಿಕ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಳ್ಳಲಿದ್ದಾರೆ. 40ಕ್ಕೂ ಅಧಿಕ ಸಂಶೋಧನಾ ವಿದ್ಯಾರ್ಥಿಗಳು ವಿಷಯ ಮಂಡನೆ ಮಾಡಲಿದ್ದಾರೆ ಎಂದು ಹೇಳಿದರು.

ಜೂ.27ರಂದು ಮಧ್ಯಾಹ್ನ 3ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಪ್ರೊ. ಎಸ್.ಆರ್.ನಿರಂಜನ್ ಸಮಾರೋಪ ಭಾಷಣ ಮಾಡುವರು. ಶಾಸಕ ಅಲ್ಲಮಪ್ರಭು ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.