ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ‘ನವ ಬೌದ್ಧಯಾನ’ ಕೃತಿ ಲೋಕಾರ್ಪಣೆ

Published : 18 ಸೆಪ್ಟೆಂಬರ್ 2024, 8:05 IST
Last Updated : 18 ಸೆಪ್ಟೆಂಬರ್ 2024, 8:05 IST
ಫಾಲೋ ಮಾಡಿ
Comments

ಕಲಬುರಗಿ: ಮಹಾಬೋಧಿ ಪ್ರಕಾಶನ, ಮಹೇಂದ್ರ ಫೌಂಡೇಷನ್ ವತಿಯಿಂದ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ‘ನವ ಬೌದ್ಧಯಾನ’ ಕೃತಿ ಲೋಕಾರ್ಪಣೆ ಹಾಗೂ ನೂತನ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರಿಗೆ ಅಭಿನಂದನಾ ಸಮಾರಂಭ ಜರುಗಿತು.

ಕಾರ್ಯಕ್ರಮದಲ್ಲಿ ಯೋಜನಾ ಇಲಾಖೆಯ ಪ್ರದೇಶಾಭಿವೃದ್ಧಿ ಮಂಡಳಿ ನಿರ್ದೇಶಕ ಡಿ.ಚಂದ್ರಶೇಖರಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ‘ಸಂವಿಧಾನದ ಆಶಯಗಳನ್ನು ಈಡೇರಿಸುವಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಿದೆ. ಡಾ. ಬಿ.ಆರ್. ಅಂಬೇಡ್ಕರ್‌ ಅವರಿಗೆ ಇದ್ದ ಬದ್ಧತೆಯನ್ನು ಶೋಷಿತ ಸಮುದಾಯಗಳ ಹೊಸ ತಲೆಮಾರಿನ ಯುವಕರು ರೂಢಿಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಹೇಳಿದರು.

ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ ಕೃತಿಯ ಕುರಿತು ಮಾತನಾಡಿ, ‘ಬೌದ್ಧ ಧರ್ಮದ ಆಳ ಮತ್ತು ಅಗಲವನ್ನು ಅರ್ಥ ಮಾಡಿಕೊಳ್ಳ ಬಯಸುವವರು ಈ ಕೃತಿಯನ್ನು ತಪ್ಪದೇ ಓದಬೇಕು’ ಎಂದರು.

ಸಂಸದ ರಾಧಾಕೃಷ್ಣ ದೊಡ್ಡಮನಿ ಹಾಗೂ ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧೀಕ್ಷಕ ಎಂಜಿನಿಯರ್ ಮಲ್ಲಿಕಾರ್ಜುನ ಎಂ.ಎಸ್. ಅವರಿಗೆ ವಿಶೇಷ ಗೌರವ ನೀಡಿ ಸನ್ಮಾನಿಸಲಾಯಿತು.

ಬೆಂಗಳೂರಿನ ಭಂತೇಜಿ ಸುಗತಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಸುರೇಶ ಎಲ್.ಶರ್ಮಾ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಸುಭಾಷ್ ಎಲ್.ಶಿಕ್ಷಣಕರ್, ಕೆ.ಎಸ್.ಅಭಿಮನ್ಯು, ಸಿಪಿಐ ವಿಠ್ಠಲ ಚಿತ್ತಕೋಟೆ, ಗುಲ್ಬರ್ಗ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಎಸ್.ಪಿ.ಸುಳ್ಳದ್, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ.ಅರವಿಂದ ಕಟ್ಟಿ, ಶಿಕ್ಷಣ ಕ್ಷೇತ್ರದ ಶಿವಾನಂದ ಖಜುರ್ಗಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಭೀಮರಾವ್ ಟಿ.ಟಿ., ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಗೋಪಾಲರೆಡ್ಡಿ, ಉದ್ಯಮಿ ಪ್ರಭುದೇವ ಪಾಟೀಲ, ದಶರಥ ಬಾಬು, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಇತರರು ಹಾಜರಿದ್ದರು.

ಎನ್ಎಸ್ಎಸ್ ಚಂದ್ರಶೇಖರ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಅಶೋಕ ತಳಕೇರಿ ಸ್ವಾಗತಿಸಿದರು. ಸತೀಶ್ ಸಜ್ಜನ್ ಹಾಗೂ ಶರಣಬಸವ ಹೆಗ್ಗಡೆ ವೇದಿಕೆಯ ಚಟುವಟಿಕೆಗಳನ್ನು ನಿರ್ವಹಿಸಿದರು. ಮಹೇಶ್ ಕುಲಕರ್ಣಿ ನಿರೂಪಿಸಿದರು. ಉಪನ್ಯಾಸಕಿ ಜಮುನಾ ಟಿಳೆ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT