ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲೋಗಿ ಪಿಎಸ್ಐ ಎತ್ತಂಗಡಿ

Last Updated 17 ಜೂನ್ 2020, 8:49 IST
ಅಕ್ಷರ ಗಾತ್ರ

ಕಲಬುರ್ಗಿ: ಜನ್ಮದಿನದ ಪ್ರಯುಕ್ತ ತಮ್ಮ ಸಂಬಂಧಿಕರು ಹಾಗೂ ಅಭಿಮಾನಿಗಳಿಂದ ಹಾಲಿನ ಅಭಿಷೇಕ ಮಾಡಿಸಿಕೊಂಡಿದ್ದ ನೆಲೋಗಿ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಮಲ್ಲಣ್ಣ ಯಲಗೋಡ ಅವರನ್ನು ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಎತ್ತಂಗಡಿ ಮಾಡಿದ್ದು, ಅವರ ಜಾಗಕ್ಕೆ ಜೇವರ್ಗಿ ಠಾಣೆ ಪಿಎಸ್‌ಐ ಸಂಗಮೇಶ ಅವರನ್ನು ನೆಲೋಗಿ ಠಾಣೆಗೆ ಒಒಡಿ ಆಧಾರದ ಮೇಲೆ ನಿಯೋಜಿಸಲಾಗಿದೆ.

ಮಲ್ಲಣ್ಣ ಅವರನ್ನು ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಸೂಕ್ತ ದೈಹಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯದಿಂದ ಜನ್ಮದಿನ ಆಚರಿಸಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ, ಎಸ್ಪಿ ಮಲ್ಲಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT