ಶುಕ್ರವಾರ, ಡಿಸೆಂಬರ್ 4, 2020
21 °C

ಪ್ರೊ.ನಾಗರಾಜು ಕೇಂದ್ರೀಯ ವಿ.ವಿ ಪ್ರಭಾರ ಕುಲಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್‌.ಎಂ. ಮಹೇಶ್ವರಯ್ಯ ಅವರ ಅಧಿಕಾರವಧಿ ಶುಕ್ರವಾರ ಮುಕ್ತಾಯವಾಗಿದ್ದರಿಂದ, ವಿ.ವಿ.ಯ ಇಂಗ್ಲಿಷ್ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಎನ್. ನಾಗರಾಜು ಅವರು ಪ್ರಭಾರ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.

ಮಹೇಶ್ವರಯ್ಯ ಅವರು ಅಧಿಕಾರ ಹಸ್ತಾಂತರಿಸಿದರು.

ಶೋಧನಾ ಸಮಿತಿಯು ಕುಲಪತಿ ಹುದ್ದೆಗೆ ಐವರು ಹೆಸರನ್ನು ಶಿಫಾರಸು ಮಾಡಿದ್ದು, ಅದಕ್ಕೆ ಮಾನವ ಸಂಪನ್ಮೂಲ ಸಚಿವಾಲಯ ಅನುಮೋದನೆ ನೀಡಬೇಕಿದ್ದು, ಬಳಿಕ ರಾಷ್ಟ್ರಪತಿಗಳ ಅಂಕಿತದೊಂದಿಗೆ ಆದೇಶ ಹೊರಬೀಳಲಿದೆ. ಅಲ್ಲಿಯವರೆಗೆ ಪ್ರಭಾರ ಕುಲಪತಿಯಾಗಿ ನಾಗರಾಜು ಕಾರ್ಯನಿರ್ವಹಿಸಲಿದ್ದಾರೆ. ಪ್ರೊ.ಮಹೇಶ್ವರಯ್ಯ ಅವರಿಗೆ ಇದೇ 14ರಂದು 70 ವರ್ಷ ತುಂಬಲಿದ್ದು, ಅಧಿಕಾರವಧಿ ಮುಗಿದಿದ್ದರಿಂದ ಹಿರಿಯ ಪ್ರಾಧ್ಯಾಪಕರಿಗೆ ಪ್ರಭಾರ ಅಧಿಕಾರ ವಹಿಸುವಂತೆ ಮಾನವ ಸಂಪನ್ಮೂಲ ಸಚಿವಾಲಯ ಸೂಚಿಸಿತ್ತು.

ಇದಕ್ಕೂ ಮುನ್ನ ವಿ.ವಿಯ ವಿವಿಧ ವಿಭಾಗಗಳ ಡೀನ್‌ಗಳು, ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ನಿರ್ಗಮಿತ ಕುಲಪತಿ ಪ್ರೊ. ಮಹೇಶ್ವರಯ್ಯ ಅವರನ್ನು ಅಭಿನಂದಿಸಿ ಬೀಳ್ಕೊಟ್ಟರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.