ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾಭಾರತಿಯಿಂದ ಉಚಿತ ಆಂಬುಲೆನ್ಸ್ ಸೇವೆ

Last Updated 18 ಮೇ 2021, 11:44 IST
ಅಕ್ಷರ ಗಾತ್ರ

ಕಲಬುರ್ಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಸಂಚಾಲಿತ ಸೇವಾ ಭಾರತಿ ವತಿಯಿಂದ ನಗರದಲ್ಲಿ ಉಚಿತ ಆಂಬುಲೆನ್ಸ್ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಶಾಸಕ ಬಸವರಾಜ ಮತ್ತಿಮೂಡ ಮಂಗಳವಾರ ಚಾಲನೆ ನೀಡಿದರು.

ದತ್ತಾತ್ರೇಯ ಪಾಟೀಲ ಮಾತನಾಡಿ, ‘ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕೋವಿಡ್‌ ಕೇರ್ ಸೆಂಟರ್ ಪ್ರಾರಂಭ ಮಾಡಿರುವ ಆರ್‌ಎಸ್‌ಎಸ್‌ ಇದೀಗ ಬಡ ಜನರಿಗೆ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಈ ಸೇವೆಯನ್ನು ನೀಡಲಿದೆ. ಕೊರೊನಾ ಪಾಸಿಟಿವ್ ಕಂಡು ಬಂದ ನಂತರ ಸೋಂಕಿತರಿಗೆ ಸಮಸ್ಯೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಈ ಸೇವೆ ಅನುಕೂಲಕರವಾಗಲಿದೆ’ ಎಂದರು.

ಸಂಘ ಪರಿವಾರದ ಪ್ರಮುಖರಾದ ಕೃಷ್ಣ ಜೋಶಿ, ವಿಭಾಗ ಪ್ರಚಾರಕ ವಿಜಯ ಮಹಾಂತೇಶ, ರಮೇಶ್ ತಿಪನೂರ, ಕಮಲಾಪುರೆ, ಕಲಬುರ್ಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ, ಬಿಜೆಪಿ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಉಮೇಶ ಪಾಟೀಲ, ಶ್ರೀನಿವಾಸ ದೇಸಾಯಿ, ದಿವ್ಯಾ ಹಾಗರಗಿ ಹಾಗೂ ಸಂಘ ಪರಿವಾರದ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT