ಸೋಮವಾರ, ಸೆಪ್ಟೆಂಬರ್ 20, 2021
22 °C

ಸಿಯುಕೆ ಕುಲಪತಿಯಾಗಿ ಡಾ.ಬಿ. ಸತ್ಯನಾರಾಯಣ ‌ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿ‌ನ ಕಡಗಂಚಿಯಲ್ಲಿರುವ ಕರ್ನಾಟಕ ‌ಕೇಂದ್ರೀಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಹೈದರಾಬಾದ್ ನ ಉಸ್ಮಾನಿಯಾ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬುಟ್ಟಾ ಸತ್ಯನಾರಾಯಣ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ನೇಮಕ ಮಾಡಿದ್ದಾರೆ.

ಗುರುವಾರ ನೇಮಕ ಆದೇಶ ಹೊರಬಿದ್ದಿದ್ದು, ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಇತ್ತೀಚೆಗೆ ನಿಧನರಾದ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರ ಅವಧಿ ಕಳೆದ ಮಾರ್ಚ್ 14ರಂದು ಮುಕ್ತಾಯವಾಗಿತ್ತು.

ಎಂಟು ತಿಂಗಳ ಬಳಿಕ ಪೂರ್ಣಪ್ರಮಾಣದ ‌ಕುಲಪತಿಯ‌ ನೇಮಕವಾದಂತಾಗಿದೆ.

ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪರಿಸರ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಪ್ರೊ.ಸತ್ಯನಾರಾಯಣ ಅವರು, 31 ಸಂಶೋಧನಾ ವರದಿಗಳನ್ನು ರಾಷ್ಟ್ರೀಯ, ಅಂತರರಾಷ್ಟ್ರೀಯ ‌ಮಟ್ಟದ ನಿಯತಕಾಲಿಕದಲ್ಲಿ ಪ್ರಕಟಿಸಿದ್ದಾರೆ.

ಐವರು ವಿದ್ಯಾರ್ಥಿಗಳಿಗೆ ಪಿಎಚ್.ಡಿ. ಮಾರ್ಗದರ್ಶನ ಪೂರ್ಣಗೊಳಿಸಿದ್ದು, ಇನ್ನೂ ಎಂಟು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಸಿಯುಕೆಯಲ್ಲಿ ಇವರ ಅವಧಿ ಗರಿಷ್ಠ 5 ವರ್ಷ ಅಥವಾ 70 ವರ್ಷ ವಯೋಮಿತಿಯವರೆಗೆ  ಇರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು