ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಕಲ್ಯಾಣ; ಯೋಜನೆಗಳ ಅನಾವರಣ 9ರಂದು

Last Updated 7 ಏಪ್ರಿಲ್ 2022, 4:26 IST
ಅಕ್ಷರ ಗಾತ್ರ

ಕಲಬುರಗಿ: ಬೀದರ್ ಜಿಲ್ಲೆಯ ಬಸವಕಲ್ಯಾಣವನ್ನು ಸುಂದರ ಸಾಂಸ್ಕೃತಿಕ ನಗರವನ್ನಾಗಿಸುವ ನಿಟ್ಟಿನಲ್ಲಿ ‘5 ವರ್ಷಗಳ ವಿವಿಧ ಯೋಜನೆಗಳ ಅನಾವರಣ ಕಾರ್ಯಕ್ರಮ’ ಏಪ್ರಿಲ್ 9ರಂದು ಬಸವಕಲ್ಯಾಣದ ತೇರು ಮೈದಾನದಲ್ಲಿ ನಡೆಯಲಿದೆ ಎಂದು ವೀರಶೈವ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪಾಟೀಲ ತಿಳಿಸಿದರು.

‘ರಾಜ್ಯ ಸರ್ಕಾರ ಒಟ್ಟು ₹560 ಕೋಟಿ ಮೊತ್ತದ ಬಹುಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈಗಾಗಲೇ ₹200 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶ್ರೀಕ್ಷೇತ್ರ ಪರುಷಕಟ್ಟೆ ಕಾಮಗಾರಿಗೆ ಚಾಲನೆ ದೊರೆತಿದೆ’ ಎಂದು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

‘ಬಸವಕಲ್ಯಾಣವನ್ನು ಸಾಂಸ್ಕೃತಿಕ ನಗರ ಹಾಗೂ ವಿಶ್ವ ಪ್ರಸಿದ್ಧ ಯಾತ್ರಾ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರ 5 ವರ್ಷಗಳ ಯೋಜನೆ ರೂಪಿಸಿದೆ. ಅಂದಿನ ಕಾರ್ಯಕ್ರಮಕ್ಕೆ ಜಾತಿ, ಮತ, ಪಂಥ, ಮೇಲು – ಕೀಳು, ಬಡವ – ಶ್ರೀಮಂತ ಎನ್ನದೇ ಎಲ್ಲರೂ ಪಾಲ್ಗೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

‘ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಸ್ವಾಮೀಜಿಗಳು, 1 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪ್ರದರ್ಶನ ಮಳಿಗೆ, ಪುಸ್ತಕಗಳ ಮಾರಾಟ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಬೆಳಿಗ್ಗೆ 8ರಿಂದ ರಾತ್ರಿ 8ರ ವರೆಗೆ ಪ್ರಸಾದದ ವ್ಯವಸ್ಥೆ ಇರಲಿದೆ’ ಎಂದು ವಿವರಿಸಿದರು.

ಕೊಪ್ಪಳದ ಗವಿಸಿದ್ದೇಶ್ವರ ಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾಹಿತಿ ಪಡೆಯಲು ಸ್ವಾಮೀಜಿಯವರು ಭಾಲ್ಕಿಯ ಗುರುಬಸವ ಪಟ್ಟದ್ದೇವರು 9448 947571, ಗಣ್ಯರು ಧನರಾಜ ತಾಳಂಪಳ್ಳಿ 99012 66666 ಹಾಗೂ ಸಾರ್ವಜನಿಕರು ಮಹೇಶ ಪಾಟೀಲ 90084 28902 ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ಮುಖಂಡರಾದ ಹಣಮಂತರಾವ ಪಾಟೀಲ, ಬಸವರಾಜ ದೇಶಮುಖ, ಉಮೇಶ ಪಾಟೀಲ, ಆರ್‌.ಜಿ. ಶೆಟಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT