ಶನಿವಾರ, ಫೆಬ್ರವರಿ 29, 2020
19 °C

ಪ್ರಾದೇಶಿಕ ಆಯುಕ್ತರಾಗಿ ಪ್ರಸಾದ್‌ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಕಾರ್ಯದರ್ಶಿಯಾಗಿ ಡಾ.ಎನ್.ವಿ. ಪ್ರಸಾದ್ ಬುಧವಾರ ಅಧಿಕಾರ ಸ್ವೀಕರಿಸಿದರು.

ಆಂಧ್ರಪ್ರದೇಶದವರಾದ 2004ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಎಎಸ್‌ ಅಧಿಕಾರಿ ಪ್ರಸಾದ್‌ ಪ್ರೊಬೇಷನರಿ ಅವಧಿಯನ್ನು ಕಲಬುರ್ಗಿ ಜಿಲ್ಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಹಾಯಕ ಆಯುಕ್ತರಾಗಿ, ರಾಯಚೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಗದಗ, ಚಿತ್ರದುರ್ಗ, ಕೊಡಗು, ದಾವಣಗೆರೆ ಹಾಗೂ ಕಲಬುರ್ಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಕೆ.ಎಫ್.ಎಸ್.ಸಿ. ವ್ಯವಸ್ಥಾಪಕ ನಿರ್ದೇಶಕರಾಗಿ, ಅಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಾಗಿ, ಕರ್ನಾಟಕ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಆಯುಕ್ತಾಲಯದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಮೊದಲು ಪ್ರಾದೇಶಿಕ ಆಯುಕ್ತರಾಗಿದ್ದ ಸುಬೋಧ ಯಾದವ್ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದು, ಜಲಶಕ್ತಿ ಮಂತ್ರಾಲಯದ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು