ಕಲಬುರಗಿ: ಗುರುವಾರ ಸಂಜೆಯಿಂದ ಶುರುವಾಗುವ ಹೊಸ ವರ್ಷಾಚರಣೆಯ ಸಡಗರದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 30 ಕಡೆ ನಾಕಾಬಂದಿಗಳನ್ನು ಸ್ಥಾಪಿಸಿ ವಾಹನ ತಪಾಸಣೆ ನಡೆಸಲಾಗುತ್ತದೆ.

ಅಲ್ಲದೇ, ಪ್ರಮುಖ ವೃತ್ತಗಳು, ಹೋಟೆಲ್, ದಾಬಾಗಳ ಬಳಿ ಜನದಟ್ಟಣಿ ನಿಯಂತ್ರಿಸಲು 850 ಪೊಲೀಸ್ ಸಿಬ್ಬಂದಿ, 300 ಜನ ಗೃಹರಕ್ಷಕ ದಳದ ಸಿಬ್ಬಂದಿ, 10 ಸಿಎಆರ್ ತುಕಡಿ ಮತ್ತು ಮೂರು ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಅವರು ತಿಳಿಸಿದ್ದಾರೆ.

ಇಬ್ಬರು ಡಿಸಿಪಿಗಳು, ಎಂಟು ಜನ ಎಸಿಪಿಗಳು, 16 ಪಿಐ ಹಾಗೂ 18 ಪಿಎಸ್ಐಗಳು ಬಂದೋಬಸ್ತ್ ಉಸ್ತುವಾರಿ ವಹಿಸಲಿದ್ದಾರೆ. ಕುಡಿದು ವಾಹನ ಚಲಾಯಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಹೊಸ ವರ್ಷಾಚರಣೆ ಕಾರ್ಯಕ್ರಮವನ್ನು ಆಯೋಜಕರು ಪೂರ್ವಾನುಮತಿ ಪಡೆಯದೇ ಆಯೋಜಿಸಿದ್ದಲ್ಲಿ ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಮದ್ಯ, ಮಾದಕ ವಸ್ತುಗಳ ಸೇವನೆ ಮಾಡುವಂತಿಲ್ಲ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಚುಡಾಯಿಸುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ನಗರದ ಪ್ರಮುಖ ವೃತ್ತಗಳಾದ ಎಸ್ವಿಪಿ ವೃತ್ತ, ಜಗತ್ ವೃತ್ತ, ಸೂಪರ್ ಮಾರ್ಕೆಟ್ಗಳಲ್ಲಿ ಪೊಲೀಸ್ ಪಿಕೆಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪೊಲೀಸರ ಬಳಿ ಬಂದು ದೂರು ಸಲ್ಲಿಸಬಹುದು ಎಂದು ಶರಣಪ್ಪ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.